ವಿಡಿಯೋ
ಬೆಂಗಳೂರಿನ ಪುಲಕೇಶಿನಗರದಲ್ಲಿ ನಡೆದ ಐಇಡಿ ಸ್ಫೋಟ ಪ್ರಕರಣವನ್ನು ಭೇದಿಸುವಲ್ಲಿ ಬೆಂಗಳೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಅಕ್ಟೋಬರ್ 20 ರಂದು ಜೆರೆಮಿಯಾ ರಸ್ತೆಯ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಈ ಘಟನೆ ನಡೆದಿತ್ತು.
ಘಟನೆಗೆ ಸಂಬಂಧಿಸಿದಂತೆ ಅಸ್ಸಾಂ ಮೂಲದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಮಿಷನರ್, ಈ ಸ್ಫೋಟದ ಹಿಂದೆ ಯಾವುದೇ ಭಯೋತ್ಪಾದಕ ಸಂಘಟನೆಗಳ ಕೈವಾಡ ಅಥವಾ ಭಯೋತ್ಪಾದನಾ ಆಯಾಮವಿಲ್ಲ.
ಇದು ಸಂಪೂರ್ಣವಾಗಿ ಕೌಟುಂಬಿಕ ಮತ್ತು ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಡೆದಿರುವ ಕೊಲೆ ಯತ್ನವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.