ವಿಡಿಯೋ
ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟದ ಹಿನ್ನೆಲೆಯಲ್ಲಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕಬ್ಬು ಬೆಳೆಗಾರರ ಮುಖಂಡರ ನಡುವೆ ಸೋಮವಾರ ತಡರಾತ್ರಿವರೆಗೆ ನಡೆದ ಮಾತುಕತೆ ಯಾವುದೇ ನಿರ್ಧಾರವಿಲ್ಲದೆ ಅಂತ್ಯಗೊಂಡಿದೆ.
ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್ಆರ್ಪಿ) ಜೊತೆಗೆ ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿಯಾಗಿ 1,000 ರೂ ಎಸ್ಎಪಿ ನೀಡಬೇಕೆಂದು ರೈತರು ಪಟ್ಟು ಹಿಡಿದಿದ್ದಾರೆ.
ಇದರಿಂದ ರೈತರ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಈ ಹಿನ್ನೆಲೆಯಲ್ಲಿ ಆಯ್ದ ರೈತ ಪ್ರತಿನಿಧಿಗಳೊಂದಿಗೆ ಅಕ್ಟೋಬರ್ 29 ರಂದು ಮತ್ತೊಂದು ಸುತ್ತಿನ ಮಾತುಕತೆ ನಡೆಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.