ವಿಡಿಯೋ
ಪ್ರಧಾನಿ ನರೇಂದ್ರ ಮೋದಿ ಅವರು, ತಮ್ಮ ಕೊನೆಯ ಉಸಿರು ಇರುವವರೆಗೂ ಭಾರತದ ಜನರಿಗೆ ಸೇವೆ ಸಲ್ಲಿಸುವುದನ್ನು ಮುಂದುವರಿಸುವುದಾಗಿ ಶುಕ್ರವಾರ ಹೇಳಿದ್ದಾರೆ.
ಗುಜರಾತ್ನ ಬನಸ್ಕಾಂತ ಜಿಲ್ಲೆಯ ಭಿಲ್ಡಿಯಲ್ಲಿ ಮೋದಿ 'ಭಾರತ ಬೋವೈನ್ ಬ್ರೀಡಿಂಗ್ ಅಂಡ್ ರಿಸರ್ಚ್ ಸೆಂಟರ್' (ಗೋವಂಶ ತಳಿ ಅಭಿವೃದ್ಧಿ ಮತ್ತು ಸಂಶೋಧನಾ ಕೇಂದ್ರ) ಉದ್ಘಾಟಿಸಿದರು.
ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಸಾರ್ವಜನಿಕ ಸೇವೆಯ ಬಗೆಗಿನ ತಮ್ಮ ಬದ್ಧತೆಯು ಎಂದಿಗೂ ಅಚಲವಾಗಿರುತ್ತದೆ ಎಂದು ತಿಳಿಸಿದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು "ಮೋದಿ ಕಾ ಬಾಪ್ ಭೀ ಜಾಯೇಗಾ" ಎಂಬ ಹೇಳಿಕೆ ನೀಡಿದ ಕೆಲವೇ ದಿನಗಳಲ್ಲಿ ಪ್ರಧಾನಿ ಈ ರೀತಿಯಾಗಿ ಟಾಂಗ್ ನೀಡಿದ್ದಾರೆ.
ವಿರೋಧ ಪಕ್ಷಗಳನ್ನು ಪರೋಕ್ಷವಾಗಿ ಟೀಕಿಸಿದ ಪ್ರಧಾನಿ, ದೇಶವು ಸಂಕಷ್ಟದಲ್ಲಿರುವಾಗ ಕೆಲವರು ಅದರಲ್ಲಿ ಸಂತೋಷ ಕಾಣುತ್ತಾರೆ ಎಂದು ಆರೋಪಿಸಿದರು. ವಿಡಿಯೋ ಇಲ್ಲಿದೆ ನೋಡಿ.