ವಿಡಿಯೋ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾತ್ರಿ 8:00 ಗಂಟೆಯಿಂದ 10:00 ಗಂಟೆಯವರೆಗೆ ಕೇವಲ 2 ಗಂಟೆ ಮಾತ್ರ ಪಟಾಕಿ ಸಿಡಿಸಲು ರಾಜ್ಯಸರ್ಕಾರ ಅವಕಾಶ ನೀಡಿದೆ.
ಅಕಸ್ಮಾತ್, ನಿಯಮ ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಮಾಲಿನ್ಯ ನಿಯಂತ್ರಣ ಮತ್ತು ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ವಿಡಿಯೋ ಇಲ್ಲಿದೆ ನೋಡಿ.