ವಿಡಿಯೋ
ಕಾಂಗ್ರೆಸ್ ಸರ್ಕಾರ ಹಾಲಿನ ದರ ಹೆಚ್ಚಿಸಿ ಜನರಿಗೆ ಬರೆ ಎಳೆದಿದೆ ಎಂದು ಬಿ.ವೈ. ವಿಜಯೇಂದ್ರ ಶನಿವಾರ ವಾಗ್ದಾಳಿ ನಡೆಸಿದ್ದಾರೆ.
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಜೀವನ ನಡೆಸುವುದು ಅತ್ಯಂತ ದುಬಾರಿಯಾಗಿದೆ ಎಂದು ಅವರು ಟೀಕಿಸಿದ್ದಾರೆ.
ದಾವಣಗರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಹಾಲಿನ ಬೆಲೆ 8 ರೂಪಾಯಿ ಹೆಚ್ಚು ಮಾಡಿದ್ದಾರೆ.
ಮೊಸರಿನ ಬೆಲೆ ಹೆಚ್ಚಳವಾಗಿದೆ. ಇನ್ನೇನು ಕೆಲವು ದಿನಗಳಲ್ಲಿ ಬಸ್ ದರವೂ ಹೆಚ್ಚಳ ಮಾಡುವ ತೀರ್ಮಾನ ಮಾಡಿದ್ದಾರೆ.
ಈ ಸರ್ಕಾರದಲ್ಲಿ ಜನರ ಪರಿಸ್ಥಿತಿ ಹೇಗಿದೆ ಎಂದರೆ ಮದುವೆಯಾದವರು ಮಕ್ಕಳ ಮಾಡಿಕೊಳ್ಳಲು ಯೋಚನೆ ಮಾಡಬೇಕು ಎಂದು ವಾಗ್ದಾಳಿ ನಡೆಸಿದರು. ವಿಡಿಯೋ ಇಲ್ಲಿದೆ ನೋಡಿ.