Watch | ಕೆಪಿಸಿಸಿ ಕಚೇರಿ ಎದುರು ಜೆಡಿಎಸ್ ಪ್ರತಿಭಟನೆ: ಪ್ರಿಯಾಂಕ್ ಖರ್ಗೆ ಹೇಳಿದ್ದಿಷ್ಟು...

ಕೆಪಿಎಸ್‌ಸಿ ಅಕ್ರಮ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಎಇಇ ಹುದ್ದೆಗಳ ಅಕ್ರಮವನ್ನು ಖಂಡಿಸಿ ಕೆಪಿಎಸ್‌ಸಿ ಹಾಗೂ ಕೆಪಿಸಿಸಿ ಕಚೇರಿ ಎದುರು ಜೆಡಿಎಸ್ ಮಂಗಳವಾರ ಪ್ರತಿಭಟನೆ ನಡೆಸಿತು.

ಜೆಡಿಎಸ್ ಮಾಜಿ ಎಂಎಲ್‌ಸಿ ಜಿಬಿಎ ಅಧ್ಯಕ್ಷ ರಮೇಶ್ ಗೌಡ ನೇತೃತ್ವದಲ್ಲಿ ಕಾರ್ಯಕರ್ತರು ಹಾಗೂ ನಾಯಕರು ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಈ ವೇಳೆ ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸರು ತಡೆದಾಗ ವಾಗ್ವಾದ ನಡೆಯಿತು.

ಬಳಿಕ ಪಿಸಿಸಿ ಕಚೇರಿಗೆ ನುಗ್ಗಲು ಯತ್ನಿಸಿದ ಜೆಡಿಎಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು.

ಈ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ವಿಧಾನಸಭೆಯಲ್ಲಿ ಸಮಸ್ಯೆಗಳನ್ನು ಚರ್ಚಿಸಲು ಬಿಜೆಪಿ ಸಿದ್ಧರಿರಲಿಲ್ಲ.

ಕೆಪಿಎಸ್‌ಸಿ ಅಧಿಕಾರಿಗಳನ್ನು ನೇಮಿಸಿದ್ದು ಬಿಜೆಪಿ ಅವಧಿಯಲ್ಲಿ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com