ವಿಡಿಯೋ
ರಾಜಧಾನಿ ದೆಹಲಿಯ ಸತ್ಯ ನಿಕೇತನ್ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಭೀಕರ ದುರಂತವೊಂದು ಸಂಭವಿಸಿದೆ.
ದೆಹಲಿ ವಿಶ್ವವಿದ್ಯಾಲಯದ ಸೌತ್ ಕ್ಯಾಂಪಸ್ ಸಮೀಪದ ಬಾಲಕರ ಪಿಜಿ ವಸತಿ ಕಟ್ಟಡ ಕುಸಿದ ಪರಿಣಾಮ ಇದುವರೆಗೆ 6 ಮಂದಿ ಮೃತಪಟ್ಟಿದ್ದು, 11 ಜನರನ್ನು ಅವಶೇಷಗಳಿಂದ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾನುವಾರ ಮಧ್ಯಾಹ್ನ ಸುಮಾರು 1.30ರ ವೇಳೆಗೆ ದುರಸ್ತಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಸುಮಾರು 50 ವರ್ಷ ಹಳೆಯ ಕಟ್ಟಡ ಏಕಾಏಕಿ ಕುಸಿದಿದೆ.
ಕಟ್ಟಡದ ನೆಲಮಾಳಿಗೆಯಲ್ಲೂ ದುರಸ್ತಿ ಕೆಲಸ ನಡೆಯುತ್ತಿತ್ತು ಎನ್ನಲಾಗಿದೆ.
ದೆಹಲಿ ಪೊಲೀಸರು, ದೆಹಲಿ ಅಗ್ನಿಶಾಮಕ ದಳ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ (DDMA) ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ವಿಡಿಯೋ ಇಲ್ಲಿದೆ ನೋಡಿ.