Watch | ಮಲ್ಲಿಕಾರ್ಜುನ್, ಬಿ.ಪಿ ಹರೀಶ್ 'ಕೆಟ್ಟ ಭಾಷೆ' ಬಳಕೆ; ಇದುನ್ನೇ ನಾವು ಕಲೀಬೇಕಾ?

ದಾವಣಗೆರೆ ಜಿಲ್ಲೆಯ ರಾಜಕೀಯ ನಾಯಕರ ನಡುವೆ ನಡೆದ ವೈಯಕ್ತಿಕ ವಾಗ್ದಾಳಿ ಹಾಗೂ ಕೆಟ್ಟ ಪದಗಳ ಬಳಕೆಯಿಂದ ಮನಸ್ಸಿಗೆ ತೀವ್ರ ನೋವಾಗಿದೆ ಎಂದು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಬೇಸರ ವ್ಯಕ್ತಪಡಿಸಿದರು.

ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅಸಂಸದೀಯ ಪದಗಳನ್ನು ಬಳಕೆ ಮಾಡಿ ಟೀಕಿಸಿದ್ದಾರೆ ಎಂಬ ಹೇಳಿಕೆಗೆ ಅವರು ಕಳವಳ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ಹಿರಿಯ ರಾಜಕೀಯ ನಾಯಕರು ಪರಸ್ಪರ ವೈಯಕ್ತಿಕವಾಗಿ ನಿಂದಿಸುವ ರೀತಿಯಲ್ಲಿ ಮಾತನಾಡುತ್ತಿರುವುದು ವಿಷಾದನೀಯ.

ದಾವಣಗೆರೆ ಜಿಲ್ಲೆಯಲ್ಲಿ ಈ ಹಿಂದೆ ಇಂತಹ ಕೆಟ್ಟ ರಾಜಕೀಯ ಸಂಸ್ಕೃತಿ ಇರಲಿಲ್ಲ. ಇದೀಗ ರಾಜಕೀಯ ವಾತಾವರಣ ಕಲುಷಿತಗೊಳ್ಳುತ್ತಿರುವುದು ನೋವಿನ ಸಂಗತಿ.

ರಾಜಕೀಯ ನಾಯಕರ ಮಾತುಗಳನ್ನು ಜನರು, ಅದರಲ್ಲೂ ಯುವಜನತೆ ಗಮನಿಸುತ್ತಾರೆ. ಇಂತಹ ಭಾಷೆ ಮುಂದಿನ ಪೀಳಿಗೆಗೆ ಕೆಟ್ಟ ಸಂದೇಶ ನೀಡುತ್ತದೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com