ವಿಡಿಯೋ
ಹಾಸನ ಜಿಲ್ಲೆಯ ಲಾಡ್ಜ್ ಒಂದರಲ್ಲಿ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ಯುವತಿಯನ್ನು 23 ವರ್ಷದ ವರ್ಷ ಎಂದು ಗುರುತಿಸಲಾಗಿದೆ.
ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯ ಶ್ರೀದೇವಿ ಲಾಡ್ಜ್‌ನಲ್ಲಿ ಘಟನೆ ನಡೆದಿದ್ದು, ಯುವತಿಯ ಮೃತದೇಹ ಬಾತ್ ರೂಮ್‌ನಲ್ಲಿ ಪತ್ತೆಯಾಗಿದೆ.
ಮೃತ ವರ್ಷ ಬೆಂಗಳೂರಿನ ಚಿಕ್ಕಬಾಣಾವರ ಪೊಲೀಸ್ ಠಾಣೆಯ ವ್ಯಾಪ್ತಿಯ ನಿವಾಸಿ ಎಂದು ತಿಳಿದುಬಂದಿದೆ.
ಈಕೆ ಕಳೆದ ಬೆಂಗಳೂರಿನಿಂದ ರಘು ಮತ್ತು ದರ್ಶನ್ ಎಂಬ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಯುವತಿ, ಶುಕ್ರವಾರದಿಂದ ಲಾಡ್ಜ್‌ನಲ್ಲಿ ತಂಗಿದ್ದರು. ವಿಡಿಯೋ ಇಲ್ಲಿದೆ ನೋಡಿ.