ವಿಡಿಯೋ
ತುಳುವನ್ನು ರಾಜ್ಯದ ಎರಡನೇ ಹೆಚ್ಚುವರಿ ಭಾಷೆಯಾಗಿ ಮಾನ್ಯ ಮಾಡಲು ಕರ್ನಾಟಕ ಸಚಿವ ಸಂಪುಟವು ಶುಕ್ರವಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಮುಖ್ಯವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಾತನಾಡುವ ತುಳು ಭಾಷೆಯು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಬೆಳವಣಿಗೆಯ ಸಾಮರ್ಥ್ಯವನ್ನು ಹೊಂದಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಡಿ.ಕೆ. ಶಿವಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಅಲ್ಲದೆ, ರಾಜ್ಯ ಸರ್ಕಾರವು ಕರಾವಳಿ ಪ್ರದೇಶಕ್ಕಾಗಿ ಪ್ರತ್ಯೇಕ ಪ್ರವಾಸೋದ್ಯಮ ನೀತಿಯನ್ನು ರೂಪಿಸಲಿದೆ ಎಂದೂ ಶಿವಕುಮಾರ್ ಹೇಳಿದರು.
ಇಷ್ಟೇ ಅಲ್ಲದೆ, ಒಟ್ಟು 32,611 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳ ಪ್ರಸ್ತಾವನೆಗಳಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
ಇದರಲ್ಲಿ ಗ್ರಾಮೀಣ ಅಭಿವೃದ್ಧಿಗಾಗಿ 16,000 ಕೋಟಿ ರೂ. ಮತ್ತು ಕರಾವಳಿ ಪ್ರದೇಶಕ್ಕಾಗಿ ಅಷ್ಟೇ ಮೊತ್ತದ ಅನುದಾನ ಸೇರಿದೆ ಎಂದು ಸಿಎಂ ತಿಳಿಸಿದರು. ವಿಡಿಯೋ ಇಲ್ಲಿದೆ ನೋಡಿ.