ವಿಡಿಯೋ
ಗದಗ ತಾಲೂಕನ್ನು ಬರ ಪೀಡಿತ ಪ್ರದೇಶ ಎಂದು ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮಾಜಿ ಸಚಿವ, ಶಾಸಕ ಎಚ್.ಕೆ ಪಾಟೀಲ್ ಹೇಳಿದ್ದಾರೆ.
ಮುಳಗುಂದ ಪಟ್ಟಣದ ಬಳಿ ಕಾರವಾರ-ಕೈಗಾ ಮತ್ತು ಗದಗ-ಇಳಕಲ್ ಸಂಪರ್ಕಿಸುವ ರಾಜ್ಯ ಹೆದ್ದಾರಿ ತಡೆದು ಪ್ರತಿಭಟಿಸುತ್ತಿದ್ದ ರೈತರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಅಕ್ಟೋಬರ್ 10ರೊಳಗಾಗಿ ತಾಲೂಕನ್ನು ಬರಪೀಡಿತ ಎಂದು ಘೋಷಿಸದಿದ್ದರೆ ರಾಜೀನಾಮೆ ನೀಡುವ ಮೂಲಕ ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ಪಾಟೀಲ್ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.