ವಿಡಿಯೋ
ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಆರೋಪಿಸಿ ಬಿಜೆಪಿ-ಜೆಡಿಎಸ್ ಸದಸ್ಯರು ಸರ್ಕಾರದ ವಿರುದ್ದ ಖಾಲಿ ಚೊಂಬು, ಚಿಪ್ಪು ಹಿಡಿದು ಪ್ರತಿಭಟನೆ ನಡೆಸಿದರು.
ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಬುಧವಾರ ವಿಧಾನಸಭೆ ವಿಪಕ್ಷನಾಯಕ ಆರ್.ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು
ಬಿಜೆಪಿ, ಜೆಡಿಎಸ್ ಶಾಸಕರು ಖಾಲಿ ಚೊಂಬು, ಖಾಲಿ ಚಿಪ್ಪು ಹಿಡಿದುಕೊಂಡು ರಾಜ್ಯ ಸರ್ಕಾರದ ವಿರುದ್ದ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ರಾಜ್ಯದ ಜನರಿಗೆ ಖಾಲಿ ಚೊಂಬು ಕೊಟ್ಟ ಸರ್ಕಾರ, ರಾಜ್ಯವನ್ನು ದಿವಾಳಿ ಮಾಡಿದ ಸರ್ಕಾರ ಎಂದು ಘೋಷಣೆ ಕೂಗಿದರು. ವಿಡಿಯೋ ಇಲ್ಲಿದೆ ನೋಡಿ.