ವಿಡಿಯೋ
ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಸದಸ್ಯರು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಕಬ್ಬಿನ ಎಫ್‌ಆರ್‌ಪಿ (FRP) ಹೆಚ್ಚಳ ಹಾಗೂ ತಮ್ಮ ಇತರ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸಿದರು.
ಡಾ. ಸ್ವಾಮಿನಾಥನ್ ಆಯೋಗ ಜಾರಿ, ಪ್ರತಿ ಟನ್ ಕಬ್ಬಿಗೆ ಕನಿಷ್ಠ 5,500 ಬೆಂಬಲ ಬೆಲೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ರೈತರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಮಂಗಳವಾರ ನಗರದ ಚನ್ನಮ್ಮ ವೃತ್ತದಲ್ಲಿ ಸಮಾವೇಶಗೊಂಡ ನಾಲ್ಕು ಸಾವಿರಕ್ಕೂ ಹೆಚ್ಚು ರೈತರು ಕೇಂದ್ರ ಸರ್ಕಾರ ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವಿಡಿಯೋ ಇಲ್ಲಿದೆ ನೋಡಿ.