ವಿಡಿಯೋ
ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಸಿಡಿದೆದ್ದಿದೆ. ಸಂಘದ ಅಧ್ಯಕ್ಷ ಆರ್. ಮಂಜುನಾಥ್ ಅವರು ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಕಳೆದ ನಾಲ್ಕು ವರ್ಷದಿಂದ ಬಿಲ್ ಪಾವತಿಯಾಗದೆ 1.5 ಲಕ್ಷ ಗುತ್ತಿಗೆದಾರರು ಪರದಾಡುತ್ತಿದ್ದಾರೆ. 8 ಇಲಾಖೆಯಲ್ಲಿ ಸುಮಾರು 38 ಸಾವಿರ ಕೋಟಿ ಹಣ ಬಾಕಿ ಇದೆ ಎಂದು ಹೇಳಿದ್ದಾರೆ.
ಬಾಕಿ ಬಿಲ್ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮಂಜುನಾಥ್ ಪತ್ರ ಬರೆದಿದ್ದಾರೆ. ನವೆಂಬರ್ ಒಳಗೆ ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಕಮಿಷನ್ ದಂಧೆಯ ದಾಖಲೆ ಬಿಡುಗಡೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಗುತ್ತಿಗೆದಾರರ ಕಮಿಷನ್ ಆರೋಪ, ಬಾಕಿ ಇರುವ ಬಿಲ್‌ಗಳು ಮತ್ತು ಯಡಿಯೂರಪ್ಪ ಕಾಲದ ಯೋಜನೆಗಳ ಕುರಿತು ಸಿಎಂ ಶಿವಕುಮಾರ್ ಚಾಮರಾಜನಗರದಲ್ಲಿ ಪ್ರತಿಕ್ರಿಯೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.