Watch | "ಅಸೂಯೆ-ದ್ವೇಷಕ್ಕೆ ಯಾವುದೇ ಮದ್ದಿಲ್ಲ": ಎಚ್‏ಡಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್ (NICE) ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಟೀಕಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಖರ್ಗೆ, ಅಸೂಯೆ ಮತ್ತು ದ್ವೇಷಕ್ಕೆ ಯಾವುದೇ ಮದ್ದಿಲ್ಲ ಎಂದು ಅವರು ಹೇಳಿದ್ದಾರೆ.

NICE ಯೋಜನೆಯು ಕಾನೂನುಬಾಹಿರವಾಗಿದ್ದರೆ, ಕುಮಾರಸ್ವಾಮಿ ಅವರು ಈ ವಿಷಯವನ್ನು ನೇರವಾಗಿ ಪ್ರಧಾನಿ ಮೋದಿ ಅಥವಾ ಗೃಹ ಸಚಿವ ಅಮಿತ್ ಶಾ ಅವರ ಗಮನಕ್ಕೆ ತರಬೇಕು ಎಂದು ಪ್ರತಿಪಾದಿಸಿದರು.

ಜನರ ವೈಯಕ್ತಿಕ ವಿಷಯಗಳ ಬಗ್ಗೆ ನಿರಂತರವಾಗಿ ಟೀಕೆ ಮಾಡುವುದು ಬಿಜೆಪಿ ಮತ್ತು ಜೆಡಿಎಸ್‌ನ ಅಭ್ಯಾಸವಾಗಿಬಿಟ್ಟಿದೆ ಎಂದು ಖರ್ಗೆ ಇದೇ ವೇಳೆ ಆರೋಪಿಸಿದರು. ವಿಡಿಯೋ ಇಲ್ಲಿದೆ ನೋಡಿ.

X
Kannada Prabha
www.kannadaprabha.com