ವಿಡಿಯೋ
ಮಂಗಳೂರಿನ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ಆವರಣದಲ್ಲಿ ಬುಧವಾರ ಮಧ್ಯಾಹ್ನ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಜೋಕಟ್ಟೆ ಸಮೀಪದ ಎಂಆರ್‌ಪಿಎಲ್ ನ ಕೋಕರ್ ಹೈಡ್ರೋಟ್ರೀಟರ್ (ಸಿಎಚ್‌ಟಿ) ಘಟಕದಲ್ಲಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 7 ಮಂದಿ ಗಾಯಗೊಂಡಿದ್ದಾರೆ.
ರಾಜೇಶ್ ಬ್ಯಾಪ್ಟಿಸ್ಟ್ ಎಂಬ ಸಿಬ್ಬಂದಿಗೆ ಶೇ.35ರಷ್ಟು ಸುಟ್ಟ ಗಾಯಗಳಾಗಿದೆ. ಅವರಿಗೆ ಶ್ರೀನಿವಾಸ ಆಸ್ಪತ್ರೆಯ ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಘಟಕದ ಪಕ್ಕದ ಕಚೇರಿಯಲ್ಲಿದ್ದ ಇತರ ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹೊರರೋಗಿಗಳಾಗಿ ಚಿಕಿತ್ಸೆ ನೀಡಲಾಗಿದೆ.
ಎಂಆರ್‌ಪಿಎಲ್ ಪ್ರಕಾರ, ಕೋಕರ್ ಹೈಡ್ರೋಟ್ರೀಟರ್ ಘಟಕದಲ್ಲಿ ಸುಮಾರು 70 ಬಾರ್ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೋಲ್ಡ್ ಸೆಪರೇಟರ್ ಒಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ. ವಿಡಿಯೋ ಇಲ್ಲಿದೆ ನೋಡಿ.