ಮನರಂಜನೆ
ಕುತೂಹಲ ಕೆರಳಿಸಿದ 'ರಂಗಿತರಂಗ' ಟ್ರೈಲರ್
ಬಹುತೇಕ ಹೊಸ ಪ್ರತಿಭೆಗಳೇ ನಟಿಸಿರುವ 'ರಂಗಿತರಂಗ' ಚಿತ್ರದ ಅಧಿಕೃತ ಟ್ರೈಲರ್ ಬಿಡುಗಡೆಯಾಗಿದ್ದು, ಯೂಟ್ಯೂಬ್ ನಲ್ಲಿ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಇತ್ತೀಚೆಗಷ್ಟೇ ಸ್ಯಾಂಡಲ್ ವುಡ್ ನ ರಾಂಕಿಂಗ್ ಸ್ಟಾರ್ ಯಶ್ ಹಾಗೂ ಶ್ರೀಮುರಳಿ ಟ್ರೈಲರ್ ವೀಕ್ಷಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು. ಚಿತ್ರವನ್ನು ನವನಿರ್ದೇಶಕ ಅನೂಪ್ ಭಂಡಾರಿ ಅವರು ನಿರ್ದೇಶಿಸಿದ್ದಾರೆ.
