ಸುದ್ದಿ
ಕೆಆರ್ ಪುರಂನಲ್ಲಿ ಖಾಸಗಿ ಬಸ್‌ಗೆ ಬೆಂಕಿ
ಕೋಲಾರದಿಂದ ಬೆಂಗಳೂರಿಗೆ ಬರುತ್ತಿದ್ದ ಶ್ರೀ ವೆಂಕಟೇಶ್ವರ ಟ್ರಾವೆಲ್ಸ್‌ಗೆ ಸೇರಿದ ಬಸ್ ಕೆಆರ್ ಪುರಂ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಪಲ್ಸರ್ ಬೈಕಿಗೆ ಡಿಕ್ಕಿ ಹೊಡೆದು ಬಳಿಕ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ ನ ಡೀಸೆಲ್ ಟ್ಯಾಂಕ್ ಸ್ಫೋಟಗೊಂಡಿದೆ. ಬೈಕ್‌ನಲ್ಲಿದ್ದ ಮೂವರು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ.
