ಸುದ್ದಿ
ಕೋಲ್ಕತಾ ಫ್ಲೈ ಓವರ್ ಕುಸಿತ ದುರಂತದ ಭೀಕರ ದೃಶ್ಯ
ಉತ್ತರ ಕೊಲ್ಕತ್ತಾದ ಬಾಬಾ ಬಜಾರ್‌ನಲ್ಲಿರುವ ಹಳೆಯ ಗಣೇಶ್ ಟಾಕೀಸ್ (ಗಿರೀಶ್ ಪಾರ್ಕ್) ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿರುವ ವಿವೇಕಾನಂದ ಫ್ಲೈಓವರ್ ಕುಸಿದು ಬಿದ್ದು, ಸುಮಾರು 17 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಪ್ರಸ್ತುತ ಅವಶೇಷಗಳಡಿ 150ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆಗ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಇನ್ನು ಈ ದುರಂತದ ಭೀಕರ ದೃಶ್ಯಾವಳಿ ಸ್ಥಳೀಯ ಸಿಸಿಟಿವಿಯೊಂದರಲ್ಲಿ ಸೆರೆಯಾಗಿದೆ.
