ಸುದ್ದಿ
ದೊಡ್ಮನೆ ಹುಡ್ಗ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ ಪಾರ್ವತಮ್ಮ ರಾಜ್‌ಕುಮಾರ್
ನಟ ಪುನೀತ್ ರಾಜ್ ಕುಮಾರ್ ಮತ್ತು ರಾಧಿಕಾ ಪಂಡಿತ್ ಅಭಿನಯದ ದುನಿಯಾ ಸೂರಿ ನಿರ್ದೇಶನದ ದೊಡ್ಮನೆ ಹುಡುಗ ಚಿತ್ರದ ಟ್ರೈಲರ್ ಅನ್ನು ಪಾರ್ವತಮ್ಮ ರಾಜ್ ಕುಮಾರ್ ಬಿಡುಗಡೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಟ್ರೈಲರ್ ಗೆ ಅಭಿಮಾನಿಗಳಿಂದ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ. ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ನೀಡಿದ್ದು, ಖ್ಯಾತ ನಟ ಅಂಬರೀಷ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.
