ಸುದ್ದಿ
ವಿಡಿಯೋ: ಬೆಂಗಳೂರಿನ ವಿಬ್ ಗಯಾರ್ ಶಾಲೆಗೆ ನುಗ್ಗಿದ ಚಿರತೆ
ಭಾನುವಾರ ಬೆಳಗ್ಗೆ ಬೆಂಗಳೂರಿನ ವರ್ತೂರು ಬಳಿ ಇರುವ ವಿಬ್ ಗಯಾರ್ ಶಾಲೆಗೆ ಚಿರತೆಯೊಂದು ನುಗ್ಗಿದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದನ್ನು ಕಂಡ ಶಾಲೆಯ ಸಿಬ್ಬಂದಿ ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಪೊಲೀಸರು ಹಾಗೂ ಅರಣ್ಯ ಸಿಬ್ಬಂದಿ ಶಾಲೆಗೆ ಭೇಟಿ ನೀಡಿ ಚಿರತೆ ಸೆರೆಗೆ ಕಾರ್ಯಾಚರಣೆ ಕೈಗೊಂಡು ಚಿರತೆಗೆ ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆಹಿಡಿದಿದ್ದಾರೆ.
