ಮಹಿಳಾ ದಿನಾಚರಣೆ: ಭಾನುವಾರ ಎಲ್ಲಾ ಸ್ಮಾರಕಗಳಲ್ಲಿ ಮಹಿಳೆಯರಿಗೆ ಉಚಿತ ಪ್ರವೇಶ

ಇದೇ ಮೊಟ್ಟ ಮೊದಲ ಬಾರಿಗೆ, ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಭಾರತೀಯ ಪುರಾತತ್ವ ಇಲಾಖೆ ಅಡಿಯಲ್ಲಿ ಬರುವ  ಸ್ಮಾರಕಗಳಿಗೆ ಭೇಟಿ ನೀಡುವ ಎಲ್ಲ ಮಹಿಳೆಯರಿಗೆ ಪ್ರವೇಶ ನೀಡುವುದಾಗಿ ಸಂಸ್ಕೃತಿ ಇಲಾಖೆ ತಿಳಿಸಿದೆ.
ಕುತುಬ್ ಮಿನಾರ್
ಕುತುಬ್ ಮಿನಾರ್
Updated on

ನವದೆಹಲಿ:  ಇದೇ ಮೊಟ್ಟ ಮೊದಲ ಬಾರಿಗೆ, ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಭಾರತೀಯ ಪುರಾತತ್ವ ಇಲಾಖೆ ಅಡಿಯಲ್ಲಿ ಬರುವ  ಸ್ಮಾರಕಗಳಿಗೆ ಭೇಟಿ ನೀಡುವ ಎಲ್ಲ ಮಹಿಳೆಯರಿಗೆ ಪ್ರವೇಶ ನೀಡುವುದಾಗಿ ಸಂಸ್ಕೃತಿ ಇಲಾಖೆ ತಿಳಿಸಿದೆ.

ಭಾನುವಾರ ಸ್ಮಾರಕಗಳಿಗೆ ಭೇಟಿ ನೀಡುವ ಮಹಿಳೆಯರಿಗೆ ಉಚಿತ ಪ್ರವೇಶ ನೀಡುತ್ತಿರುವುದಾಗಿ ಸಚಿವಾಲಯ ಆದೇಶ ಹೊರಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳನ್ನುಭಾನುವಾರ ಮಹಿಳೆಯರಿಗೆ ಹಸ್ತಾಂತರಿಸುವುದಾಗಿ ಘೋಷಿಸಿದ ಕೆಲ ದಿನಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ನಮ್ಮ ದೇಶದಲ್ಲಿ, ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸುವ ಮೊದಲಿನಿಂದಲೂ ಮಹಿಳೆಯರನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ.  ಪುರಾತನ ಕಾಲದಿಂದಲೂ ನಮ್ಮ ಸಮಾಜದಲ್ಲಿ ದೇವತೆಯ ಸ್ಥಾನಮಾನ ನೀಡಲಾಗಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅಭಿಪ್ರಾಯ ಪಟ್ಟಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com