ನೈಜೀರಿಯಾದಲ್ಲಿ ಬಾಂಬ್ ಸ್ಪೋಟ: 47 ಸಾವು

ಈಶಾನ್ಯ ನೈಜೀರಿಯಾದ ಸಬೊನ್ ಗರಿ ಮಾರುಕಟ್ಟೆ ಪ್ರದೇಶದಲ್ಲಿ ಬಾಂಬ್ ಸ್ಪೋಟಗೊಂಡಿದ್ದು, ಘಟನೆಯಲ್ಲಿ 47ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ...
ನೈಜೀರಿಯಾದಲ್ಲಿ ಬಾಂಬ್ ಸ್ಪೋಟ: 47 ಸಾವು (ಸಾಂದರ್ಭಿಕ ಚಿತ್ರ)
ನೈಜೀರಿಯಾದಲ್ಲಿ ಬಾಂಬ್ ಸ್ಪೋಟ: 47 ಸಾವು (ಸಾಂದರ್ಭಿಕ ಚಿತ್ರ)

ಕ್ಯಾನೊ (ನೈಜೀರಿಯಾ): ಈಶಾನ್ಯ ನೈಜೀರಿಯಾದ ಸಬೊನ್ ಗರಿ ಮಾರುಕಟ್ಟೆ ಪ್ರದೇಶದಲ್ಲಿ ಬಾಂಬ್ ಸ್ಪೋಟಗೊಂಡಿದ್ದು, ಘಟನೆಯಲ್ಲಿ 47ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.

ಮಾರುಕಟ್ಟೆಯ ಮೊಬೈಲ್ ಫೋನ್ ಮಳಿಗೆಗಳ ಬಳಿ ಬಾಂಬ್ ಸ್ಪೋಟಗೊಂಡಿದ್ದು, ಸ್ಥಳದಲ್ಲಿದ್ದ 47 ಸಾವನ್ನಪ್ಪಿದ್ದಾರೆ. ಅಲ್ಲದೆ, 50ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಜನನಿ ಬಿಡ ಪ್ರದೇಶವಾಗಿರುವ ಸಬೊನ್ ಗರಿ ಮಾರುಕಟ್ಟೆಯ ಮೊಬೈಲ್ ಫೋನ್ ಮಳಿಗೆಗಳ ಬಳಿ ನಿನ್ನೆ ಮಧ್ಯಾಹ್ನ 1.15ರ ಸುಮಾರಿಗೆ ಬಾಂಬ್ ಸ್ಪೋಟ ಸಂಭವಿಸಿದೆ. ಇದರ ಪರಿಣಾಮ ಸ್ಥಳದಲ್ಲಿ 47 ಮಂದಿ ಸಾವನ್ನಪ್ಪಿದ್ದಾರೆ. 50 ಕ್ಕೂ ಹೆಚ್ಚು ಮಂದಿ ಈಗಾಗಲೇ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬಿಯು ಜನರಲ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com