ಭದ್ರತಾ ಸಲಹೆಗಾರರ ಮಟ್ಟದ ಮಾತುಕತೆಗೆ ಪಾಕ್ ಒಪ್ಪಿಗೆ

ಭಾರತ ಮತ್ತು ಪಾಕಿಸ್ತಾನ ಮಧ್ಯೆ ಈ ತಿಂಗಳ ಅಂತ್ಯಕ್ಕೆ ಭದ್ರತಾ ಸಲಹೆಗಾರರ ಮಟ್ಟದ ಮಾತುಕತೆಗೆ ಭಾರತ ನೀಡಿರುವ...
ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಕಾಶ್ಮೀರ ಕಣಿವೆಯಲ್ಲಿ ಭದ್ರತೆಯಲ್ಲಿ ತೊಡಗಿರುವ ಭಾರತೀಯ ಯೋಧರು
ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಕಾಶ್ಮೀರ ಕಣಿವೆಯಲ್ಲಿ ಭದ್ರತೆಯಲ್ಲಿ ತೊಡಗಿರುವ ಭಾರತೀಯ ಯೋಧರು

ಇಸ್ಲಾಮಾಬಾದ್ :ಭಾರತ ಮತ್ತು ಪಾಕಿಸ್ತಾನ ಮಧ್ಯೆ ಈ ತಿಂಗಳ ಅಂತ್ಯಕ್ಕೆ ಭದ್ರತಾ ಸಲಹೆಗಾರರ ಮಟ್ಟದ ಮಾತುಕತೆಗೆ ಭಾರತ ನೀಡಿರುವ ಆಹ್ವಾನವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ.

ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಶರೀಫ್ ಅವರ ರಾಷ್ಟ್ರೀಯ ಭದ್ರತಾ ಸಲಹೆಗಾರ ಸರ್ತಾಜ್ ಅಜೀಜ್, ಅವರು ಭಾರತಕ್ಕೆ ಈ ತಿಂಗಳ 23ಕ್ಕೆ ಆಗಮಿಸಲಿದ್ದಾರೆ.ತಮ್ಮ ಈ  ಭೇಟಿ ಮಹತ್ವದ್ದಾಗಿದ್ದು, ಎರಡೂ ದೇಶಗಳ ನಡುವಣ ಪ್ರಮುಖ ವಿವಾದಗಳನ್ನು ಬಗೆಹರಿಸಲು ಸಹಾಯವಾಗಬಹುದು ಎಂದು ಅವರು ಆಶಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ರಷ್ಯಾ ಸಮಿತ್ ನಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಭದ್ರತಾ ಸಲಹೆಗಾರರ ಮಟ್ಟದ ಮಾತುಕತೆ ನಡೆಸುವಂತೆ ಸಲಹೆ ನೀಡಿದ್ದರು. ಗಡಿ ಭಾಗದಲ್ಲಿ ಭಯೋತ್ಪಾದನೆಯನ್ನು ನಿಗ್ರಹಿಸುವುದು ಸಭೆಯಲ್ಲಿ ಚರ್ಚೆಗೊಳ್ಳುವ ವಿಷಯಗಳಲ್ಲಿ ಪ್ರಮುಖವಾಗಿದೆ.

ಭಾರತ ಮತ್ತು ಪಾಕಿಸ್ತಾನ ನಡುವಣ ಹಗೆತನ ಸುಮಾರು ಏಳು ದಶಕದ್ದು. ಗಡಿ ನಿಯಂತ್ರಣ ರೇಖೆಯಲ್ಲಿ ಪದೇ ಪದೇ ಯುದ್ಧ  ನಡೆಯುವುದು, ಭಯೋತ್ಪಾದನೆ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಂದಿನಿಂದ ಇನ್ನೂ ಜಾಸ್ತಿಯಾಗಿದೆ. 

ಈ ಮಧ್ಯೆ ಸ್ವಾತಂತ್ರ್ಯೋತ್ಸವಕ್ಕೆ ಇನ್ನೆರಡು ದಿನ ಬಾರಿ ಇರುವಾಗಲೇ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾಶ್ಮೀರ ಕಣಿವೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com