ವಿದೇಶ

ಭಾರತದೊಂದಿಗೆ ಮಾತುಕತೆಗೆ ಸಿದ್ದ: ಪಾಕ್ ಪ್ರಧಾನಿ ನವಾಜ್ ಷರೀಫ್

ಪಾಕಿಸ್ತಾನ ಭಾರತದೊಂದಿಗೆ ಎಲ್ಲಾ ವಿಷಯಗಳ ಬಗ್ಗೆಯೂ ಚರ್ಚೆ ನಡೆಸಲು ಸಿದ್ಧವಿದೆ ಎಂದು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಯುಎಸ್ ನ ರಾಷ್ಟ್ರೀಯ ಭದ್ರತಾ ಸಲಹೆಗಾರ ಸುಸಾನ್ ರೈಸ್ ಗೆ ತಿಳಿಸಿದ್ದಾರೆ.

ಭಾರತದೊಂದಿಗೆ ಮಾತುಕತೆಗೆ ಸಿದ್ದ: ಪಾಕ್ ಪ್ರಧಾನಿ ನವಾಜ್ ಷರೀಫ್
ನವಾಜ್ ಷರೀಫ್
Published On :

ಇಸ್ಲಾಮಾಬಾದ್:  ಪಾಕಿಸ್ತಾನ ಭಾರತದೊಂದಿಗೆ ಎಲ್ಲಾ ವಿಷಯಗಳ ಬಗ್ಗೆಯೂ ಚರ್ಚೆ ನಡೆಸಲು ಸಿದ್ಧವಿದೆ ಎಂದು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಯುಎಸ್ ನ ರಾಷ್ಟ್ರೀಯ ಭದ್ರತಾ ಸಲಹೆಗಾರ ಸುಸಾನ್ ರೈಸ್ ಗೆ ತಿಳಿಸಿದ್ದಾರೆ.

ಭಾರತ-ಪಾಕಿಸ್ತಾನ ನಡುವಿನ ಎನ್ಎಸ್ಎ ನಡುವಿನ ಮಾತುಕತೆ ರದ್ದುಗೊಂಡಿರುವ ಹಿನ್ನೆಲೆಯಲ್ಲಿ  ಪಾಕಿಸ್ತಾನ ಅಂತಾರಾಷ್ಟ್ರೀಯ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿದ್ದು ಅಮೆರಿಕಾದ ಭದ್ರತಾ ಸಲಹೆಗಾರರೊಂದಿಗೆ ಭಾರತ ಹಾಗೂ ಅಫ್ಘಾನಿಸ್ತಾನದೊಂದಿಗಿನ ಸಂಬಂಧದ ಬಗ್ಗೆ ನವಾಜ್ ಷರೀಫ್ ಮಾತುಕತೆ ನಡೆಸಿದ್ದಾರೆ.
ಅಮೇರಿಕ ಭದ್ರತಾ ಸಲಹೆಗಾರ ರೈಸ್, ಪಾಕಿಸ್ತಾನ ಪ್ರವಾಸದಲ್ಲಿದ್ದು ಅಲ್ಲಿನ ಮಿಲಿಟರಿ ನಾಯಕರೊಂದಿಗೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಈ ವೇಳೆ ಯುಎಸ್ ಭದ್ರತಾ ಸಲಹೆಗಾರರನ್ನು ಭೇಟಿ ಮಾಡಿದ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್, ಆರ್ಥಿಕತೆ, ರಕ್ಷಣೆ ಮತ್ತು ಭಯೋತ್ಪಾದನಾ ನಿಗ್ರಹ ವಿಷಯದಲ್ಲಿ ಅಮೇರಿಕಾ ಪಾಕಿಸ್ತಾನದ ಪ್ರಮುಖ ಮಿತ್ರ ರಾಷ್ಟ್ರ ಎಂದು ಹೇಳಿದ್ದಾರೆ. ಇದೇ ವೇಳೆ ಭಾರತದೊಂದಿಗೆ ಮುಕ್ತ ಮಾತುಕತೆಗೆ ಸಿದ್ಧವಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.