ಮೋದಿ ಭಾರತ- ಅಮೆರಿಕ ದ್ವಿಪಕ್ಷೀಯ ಸಂಬಂಧದ ಬಗ್ಗೆ ಸ್ಪಷ್ಟತೆ ಹೊಂದಿದ್ದಾರೆ: ಶ್ವೇತ ಭವನ

ಅಮೆರಿಕದ ಶ್ವೇತ ಭವನ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅತ್ಯಂತ ಮೆಚ್ಚುಗೆ ವ್ಯಕ್ತಪಡಿಸಿದ್ದು, ಭಾರತ-ಅಮೆರಿಕದ ದ್ವಿಪಕ್ಷೀಯ ಸಂಬಂಧವನ್ನು ಪ್ರಧಾನಿ ಮೋದಿ ಸ್ಪಷ್ಟವಾಗಿ ಅರ್ಥಮಾಡಿಕೊಂಡಿದ್ದಾರೆ
ನರೇಂದ್ರ ಮೋದಿ(ಸಂಗ್ರಹ ಚಿತ್ರ)
ನರೇಂದ್ರ ಮೋದಿ(ಸಂಗ್ರಹ ಚಿತ್ರ)

ವಾಷಿಂಗ್ಟನ್: ಅಮೆರಿಕದ ಶ್ವೇತ ಭವನ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅತ್ಯಂತ ಮೆಚ್ಚುಗೆ ವ್ಯಕ್ತಪಡಿಸಿದ್ದು, ಭಾರತ-ಅಮೆರಿಕದ ದ್ವಿಪಕ್ಷೀಯ ಸಂಬಂಧವನ್ನು ಪ್ರಧಾನಿ ಮೋದಿ ಸ್ಪಷ್ಟವಾಗಿ ಅರ್ಥಮಾಡಿಕೊಂಡಿದ್ದಾರೆ ಹಾಗೂ ತಮ್ಮ ದೇಶವನ್ನು ಅಭಿವೃದ್ಧಿಗೊಳಿಸುವ ಬಗ್ಗೆ ಸ್ಪಷ್ಟ ದೃಷ್ಟಿಕೋನ ಹೊಂದಿದ್ದಾರೆ ಎಂದು ಹೇಳಿದೆ.
ಅಮೇರಿಕ ಅಧ್ಯಕ್ಷ ಬರಾಕ್ ಒಬಾಮ ಪ್ರಧಾನಿ ನರೇಂದ್ರ ಮೋದಿ ಅವರ ಕೌಶಲ್ಯ ಹಾಗೂ ಸಾಮರ್ಥ್ಯದವನ್ನು ಗೌರವಿಸುತ್ತಾರೆ ಎಂದು ಶ್ವೇತ ಭವನದ ವಕ್ತಾರ ಜೋಷ್ ಅರ್ನೆಸ್ಟ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅತಿದೊಡ್ಡ ಪ್ರಜಾಪ್ರಭುತ್ವದ ಜವಾಬ್ದಾರಿಯನ್ನು ನೀಡಲಾಗಿದೆ. ಅದನ್ನು ನಿರ್ವಹಿಸುವುದು ಎಷ್ಟು ಸವಾಲಿನ ಕೆಲಸ ಎಂಬುದು ಒಬಾಮ ಅವರಿಗೆ ವಿಶೇಷವಾಗಿ ತಿಳಿದಿದೆ. ಪ್ಯಾರಿಸ್ ನಲ್ಲಿ ನಡೆದ ಹವಾಮಾನ ಶೃಂಗಸಭೆಯಲ್ಲಿ ಒಬಾಮ ಅವರನ್ನು ಮೋದಿ 6 ನೇ ಬಾರಿಗೆ ಭೇಟಿ ಮಾಡಿದ್ದು, ಮೋದಿ ಪ್ರಾಮಾಣಿಕ ಮತ್ತು ನೇರ ವ್ಯಕ್ತಿ ಎಂಬುದನ್ನು ಒಬಾಮ ಮನಗಂಡಿದ್ದಾರೆ ಎಂದು ಜೋಷ್ ಅರ್ನೆಸ್ಟ್ ಹೇಳಿದ್ದಾರೆ.
ಪ್ರಮುಖ ವಿಷಯಗಳ ಬಗ್ಗೆ ಪರಿಣಾಮಕಾರಿಯಾದ ನಿರ್ಧಾರ ಕೈಗೊಳ್ಳುವ ಉಭಯ ನಾಯಕರ ಸಾಮರ್ಥ್ಯದಿಂದ ಇಡಿ ವಿಶ್ವಕ್ಕೆ ಒಳಿತಾಗಲಿದೆ ಎಂದು ಅರ್ನೆಸ್ಟ್ ಅಭಿಪ್ರಾಯಪಟ್ಟಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com