

ಇಸ್ಲಾಮಾಬಾದ್: ಪ್ರಧಾನಿ ನರೇಂದ್ರ ಮೋದಿ 2016 ರಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಾಕಿಸ್ತಾನ ಪ್ರವಾಸದಲ್ಲಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
2016 ರಲ್ಲಿ ನಡೆಯಲಿರುವ ದಕ್ಷಿಣ ಏಷ್ಯಾ ಪ್ರಾದೇಶಿಕ ಸಹಕಾರ ಸಂಘ(ಸಾರ್ಕ್) ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಇಸ್ಲಾಮಾಬಾದ್ ಗೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರೊಂದಿಗೆ ತಾವೂ ಪಾಕಿಸ್ತಾನಕ್ಕೆ ಭೇಟಿ ನೀಡುವುದಾಗಿ ಸುಷ್ಮಾ ಸ್ವರಾಜ್ ಹೇಳಿರುವುದನ್ನು ಜಿಯೋ ಟಿವಿ ವರದಿ ಮಾಡಿದೆ. ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾಗವಹಿಸಲು ಸುಷ್ಮಾ ಸ್ವರಾಜ್ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾರೆ.