ರಷ್ಯಾ: ಮನೋರೋಗ ಆಸ್ಪತ್ರೆಯಲ್ಲಿ ಅಗ್ನಿ ದುರಂತ; 23 ಮಂದಿ ಸಾವು

ಕಳೆದ ರಾತ್ರಿ ರಷ್ಯಾದ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 23 ಮಂದಿ ಮೃತಪಟ್ಟಿದ್ದಾರೆ...
ಅಗ್ನಿ ದುರಂತ
ಅಗ್ನಿ ದುರಂತ
Updated on: 
ಮಾಸ್ಕೊ: ಕಳೆದ ರಾತ್ರಿ ರಷ್ಯಾದ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 23 ಮಂದಿ ಮೃತಪಟ್ಟಿದ್ದಾರೆ.
ವೊರೊನೆಜ್ ಪ್ರದೇಶದಲ್ಲಿರುವ ಮನೋರೋಗ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದೆ. ರಕ್ಷಣಾ ತಂಡ ಇದುವರೆಗೆ ಸುಟ್ಟು ಕರಕಲಾದ 23  ಮೃತದೇಹಗಳನ್ನು ಹೊರತೆಗೆದಿದೆ ಎಂದು ರಷ್ಯಾದ ತುರ್ತು ಸೇವೆಗಳ ಸಚಿವಾಲಯ ಹೇಳಿದೆ.
ಅಗ್ನಿ ದುರಂತ ವೇಳೆ ಆಸ್ಪತ್ರೆಯಲ್ಲಿ ಸಿಬ್ಬಂದಿ ಸೇರಿ 90 ಕ್ಕೂ ಹೆಚ್ಚು ಮಂದಿಯಿದ್ದು, ಇವರಲ್ಲಿ 51 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. 23 ಮಂದಿ ಸುಟ್ಟು ಕರಕಲಾದರು ಎಂದು ಸುದ್ದಿಸಂಸ್ಥೆ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com