ಫ್ರಾನ್ಸ್ ಅಧ್ಯಕ್ಷ ಈ ಬಾರಿಯ ಗಣರಾಜ್ಯೋತ್ಸವದ ಮುಖ್ಯ ಅತಿಥಿ

ಫ್ರಾನ್ಸ್ ಅಧ್ಯಕ್ಷ ಫ್ರಾಂಕೊಯಿಸ್ ಹೊಲಾಂಡೆ ಅವರು ಈ ಬಾರಿ ನಮ್ಮ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ...
ಫ್ರಾನ್ಸ್ ಅಧ್ಯಕ್ಷ ಫ್ರಾಂಕೊಯಿಸ್ ಹೊಲಾಂಡೆ
ಫ್ರಾನ್ಸ್ ಅಧ್ಯಕ್ಷ ಫ್ರಾಂಕೊಯಿಸ್ ಹೊಲಾಂಡೆ
Updated on: 
ನವದೆಹಲಿ: ಫ್ರಾನ್ಸ್ ಅಧ್ಯಕ್ಷ ಫ್ರಾಂಕೊಯಿಸ್ ಹೊಲಾಂಡೆ ಅವರು ಈ ಬಾರಿ ನಮ್ಮ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. 
67ನೇ ಗಣರಾಜ್ಯ ದಿನಕ್ಕೆ ಮುಖ್ಯ ಅತಿಥಿಯಾಗಲು ಹೊಲಾಂಡೆ ಅವರು ಒಪ್ಪಿದ್ದು, ಇದು ಎರಡೂ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸಲಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಹೇಳಿದ್ದಾರೆ. 
ಫ್ರಾನ್ಸ್ ‍ನ ಅಧ್ಯಕ್ಷರೊಬ್ಬರು ಭಾರತದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿರುವುದು ಇದು 5ನೇ ಬಾರಿ. 1976, 1980, 1998 ಮತ್ತು 2008ರಲ್ಲೂ ಫ್ರಾನ್ಸ್ ಅಧ್ಯಕ್ಷರೇ ಮುಖ್ಯ ಅತಿಥಿಯಾಗಿದ್ದರು. ಭೂತಾನ್ ಅಧ್ಯಕ್ಷರು ನಾಲ್ಕು ಬಾರಿ ಈ ಅವಕಾಶ ಪಡೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com