
ಇಸ್ಲಾಮಾಬಾದ್: ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಸಂಬಂಧ ಉತ್ತಮಗೊಳ್ಳುವ ಸ್ಥಿತಿ ನಿರ್ಮಾಣವಾಗುತ್ತಿದ್ದು, ಭಾರತ ವಿರೋಧಿ ಹೇಳಿಕೆಗಳನ್ನು ನೀಡದಂತೆ ಪಾಕ್ ಪ್ರಧಾನಿ ನವಾಜ್ ಷರೀಫ್ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ತಾಕೀತು ಮಾಡಿದ್ದಾರೆ.
ನವಾಜ್ ಷರೀಫ್ ಎಚ್ಚರಿಕೆ ನೀದಿರುವುದರ ಪಾಕ್ ದೈನಿಕ ದಿ ನೇಷನ್ ವರದಿ ಪ್ರಕಟಿಸಿದ್ದು, ದ್ವಿಪಕ್ಷೀಯ ಸಂಬಂಧ ಈಗಷ್ಟೇ ಒಂದು ಹಂತಕ್ಕೆ ಬರುತ್ತಿದ್ದು, ಸೌಹಾರ್ದತೆಗೆ ಧಕ್ಕೆಯಾಗುವಂತೆ ಭಾರತದ ವಿರುದ್ಧ ಯಾವುದೇ ಹೇಳಿಕೆ ನೀಡಬಾರದು ಎಂದು ಷರೀಫ್ ಪಾಕ್ ನ ಸಚಿವರು ಹಾಗೂ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ದ್ವಿಪಕ್ಷೀಯ ಸಂಬಂಧ ಉತ್ತಮಗೊಳ್ಳುವುದಕ್ಕೆ ಪೂರಕವಾಗಿರುವ ವಿಷಯಗಳ ಬಗ್ಗೆ ಮಾತ್ರ ಹೇಳಿಕೆ ನೀಡಿ, ಹಿಂದಿನ ವಿಷಯಗಳನ್ನು ಮತ್ತೆ ಪ್ರಸ್ತಾಪಿಸಬೇಡಿ ಎಂದು ಷರೀಫ್ ಸೂಚನೆ ನೀಡಿರುವುದನ್ನು ದಿ ನೇಷನ್ ಪತ್ರಿಕೆ ಉಲ್ಲೇಖಿಸಿದೆ. ಭಾರತದೊಂದಿಗೆ ದ್ವಿಪಕ್ಷೀಯ ಸಂಬಂಧ ಉತ್ತಮಗೊಳ್ಳುವುದರ ಬಗ್ಗೆ ಅಶಾವಾದಿಯಾಗಿರುವುದಾಗಿ ನವಾಜ್ ಷರೀಫ್ ಹೇಳಿದ್ದಾರೆ.
ಇತ್ತೀಚೆಗಷ್ಟೇ ನಡೆದ ಭಾರತ-ಪಾಕ್ ದ್ವಿಪಕ್ಷೀಯ ಮಾತುಕತೆ ವೇಳೆ ವ್ಯಾಪಾರ- ವಹಿವಾಟು, ಭಯೋತ್ಪಾದನೆ ನಿಗ್ರಹದ ವಿಷಯ ಚರ್ಚಿಸಿದಾಗ ಕಾಶ್ಮೀರ ವಿವಾದದ ಬಗ್ಗೆ ಪ್ರಸ್ತಾಪಿಸಲು ಷರೀಫ್ ಉತ್ಸುಕರಾಗಿದ್ದರು ಎಂದು ಪಾಕ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement