ದುಬೈ: ಸೌದಿ ಅರೇಬಿಯಾದಲ್ಲಿರುವ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ಅಗ್ನಿ ಅನಾಹುತದಿಂದಾಗಿ 25ಕ್ಕೂ ಹೆಚ್ಚು ಜನರು ಮೃತಪಟ್ಟಿರುವ ಘಟನೆ ವರದಿಯಾಗಿದೆ.
ದಕ್ಷಿಣ ಸೌದಿಯಲ್ಲಿರುವ ಜಝಾನ್ ಜನರಲ್ ಆಸ್ಪತ್ರೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಸುಮಾರು 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಆಸ್ಪತ್ರೆಗೆ ಯಾವ ಕಾರಣದಿಂದ ಬೆಂಕಿ ಹೊತ್ತಿಕೊಂಡಿದೆ ಎಂಬುದು ತಿಳಿದು ಬಂದಿಲ್ಲ. ಆಸ್ಪತ್ರೆಯಲ್ಲಿದ್ದ ಇತರ ರೋಗಿಗಳನ್ನು ಇತರೆ ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಬೆಂಕಿ ಅವಘಡದ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ ಎಂದು ನಾಗರಿಕ ರಕ್ಷಣಾ ಏಜೆನ್ಸಿ ತಿಳಿಸಿದೆ.