ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಅಫ್ಘಾನಿಸ್ತಾನಕ್ಕೆ ಪಾಕ್ ಸೇನಾ ಮುಖ್ಯಸ್ಥರ ಭೇಟಿ

ಪ್ರಧಾನಿ ನರೇಂದ್ರ ಮೋದಿ ಅಫ್ಘಾನಿಸ್ತಾನಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಪಾಕಿಸ್ತಾನ ಸೇನಾ ಮುಖ್ಯಸ್ಥ ರಹೀಲ್ ಶರೀಫ್ ಸಹ ಅಫ್ಘಾನಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ.
ಪಾಕಿಸ್ತಾನ ಸೇನಾ ಮುಖ್ಯಸ್ಥ
ಪಾಕಿಸ್ತಾನ ಸೇನಾ ಮುಖ್ಯಸ್ಥ

ರಾವಲ್ಪಿಂಡಿ: ಪ್ರಧಾನಿ ನರೇಂದ್ರ ಮೋದಿ ಅಫ್ಘಾನಿಸ್ತಾನಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಪಾಕಿಸ್ತಾನ ಸೇನಾ ಮುಖ್ಯಸ್ಥ ರಹೀಲ್ ಶರೀಫ್ ಸಹ ಅಫ್ಘಾನಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ.

ರಹೀಲ್ ಶರೀಫ್ ಡಿ.27 ರಂದು ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಗೆ ಭೇಟಿ ನೀಡಿ ರಾಜಕೀಯ, ಸೇನಾ ಮುಖಂಡರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಅಫ್ಘಾನಿಸ್ತಾನದಲ್ಲಿ ಸಂಸತ್ ಭವನ ಉದ್ಘಾಟನೆ ಮಾಡಿ ವಾಪಸ್ಸಾದ ಬೆನ್ನಲ್ಲೇ ಪಾಕ್ ಸೇನಾ ಮುಖ್ಯಸ್ಥರು ಭೇಟಿ ನೀಡುತ್ತಿದ್ದಾರೆ.

ಅಫ್ಘಾನಿಸ್ತಾನದ ಸಂಸತ್ ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಪಾಕಿಸ್ತಾನದ ಭಯೋತ್ಪಾದನೆಯನ್ನು ತಡೆಗಟ್ಟದೇ ಅಫ್ಘಾನಿಸ್ತಾನ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com