
ಲಾಹೋರ್: ಮುಂದಿನ ತಿಂಗಳು ನಡೆಯಲಿರುವ ಭಾರತ-ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿಗಳ ದ್ವಿಪಕ್ಷೀಯ ಮಾತುಕತೆ ಬಗ್ಗೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳುವುದು ಸೂಕ್ತ ಅಲ್ಲ ಎಂದು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರ ವಿದೇಶಾಂಗ ಸಲಹೆಗಾರ ಸರ್ತಾಜ್ ಅಜೀಜ್ ಹೇಳಿದ್ದಾರೆ.
ಭಾರತ-ಪಾಕ್ ದ್ವಿಪಕ್ಷೀಯ ಸಂಬಂಧದ ಬಗ್ಗೆ ರೇಡಿಯೋ ಪಾಕಿಸ್ತಾನದಲ್ಲಿ ಮಾತನಾಡಿದ ಸರ್ತಾಜ್ ಅಜೀಜ್, ಮುಂದಿನ ತಿಂಗಳು ನಡೆಯಲಿರುವ ವಿದೇಶಾಂಗ ಕಾರ್ಯದರ್ಶಿಗಳ ದ್ವಿಪಕ್ಷೀಯ ಮಾತುಕತೆಯಿಂದ ತ್ವರಿತ ಫಲಿತಾಂಶದ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳುವುದು ಸೂಕ್ತ ಅಲ್ಲ, ಮಾತುಕತೆಯ ಪ್ರಥಮ ಭಾಗದಲ್ಲಿ ಗಡಿ ಭಾಗದಲ್ಲಿ ಶಾಂತಿಯುತ ವಾತಾವರಣ ಕಾಯ್ದುಕೊಳ್ಳುವ ಬಗ್ಗೆ ಮಾತುಕತೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
ಜನವರಿ ಮಧ್ಯಭಾಗದಲ್ಲಿ ಇಸ್ಲಾಮಾಬಾದ್ ನಲ್ಲಿ ಉಭಯ ದೇಶಗಳ ವಿದೇಶಾಂಗ ಕಾರ್ಯದರ್ಶಿಗಳ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ ಎಂದು ಸರ್ತಾಜ್ ಅಜೀಜ್ ಹೇಳಿದ್ದಾರೆ.
Advertisement