
ಇಸ್ಲಾಮಾಬಾದ್: ಜನವರಿಯಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿಗಳ ಸಭೆಯಲ್ಲಿ ಮುಂದಿನ ಆರು ತಿಂಗಳಲ್ಲಿ ಚರ್ಚೆಯಾಗಬೇಕಿರುವ ಪ್ರಮುಖ 10 ವಿಷಯಗಳ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಪಾಕಿಸ್ತಾನ ಪ್ರಧಾನಿಯ ವಿದೇಶಾಂಗ ಸಲಹೆಗಾರ ಸರ್ತಾಜ್ ಅಜೀಜ್ ಹೇಳಿದ್ದಾರೆ.
ದ್ವಿಪಕ್ಷೀಯ ಮಾತುಕತೆಯಿಂದ ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳದಂತೆ ಹೇಳಿದ್ದ ಸರ್ತಾಜ್ ಅಜೀಜ್ ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆ ಸವಾಲಿನ ವಿಷಯವಾಗಿದ್ದು, ಪ್ರಮುಖ ವಿಷಯಗಳ ಬಗ್ಗೆ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.
ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ದಿಢೀರ್ ಭೇಟಿಯ ಬಗ್ಗೆ ಪಾಕಿಸ್ತಾನದ ಸೆನೆಟ್ ನಲ್ಲಿ ಹೇಳಿಕೆ ನೀಡಿರುವ ಸರ್ತಾಜ್ ಅಜೀಜ್, ಪ್ರಧಾನಿ ಮೋದಿ ಪಾಕಿಸ್ತಾನಕ್ಕೆ ಭೇಟಿ ನೀಡಿರುವುದಕ್ಕೆ ಪಾಕಿಸ್ತಾನ, ಭಾರತ, ಅಂತಾರಾಷ್ಟ್ರೀಯ ಸಮುದಾಯ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆಯಿಂದ ಕೆಲವು ವಿಷಯಗಳಲ್ಲಿ ತ್ವರಿತಗತಿಯ ಪ್ರಗತಿ ಕಂಡುಬಂದರೆ ಇನ್ನೂ ಕೆಲವು ವಿಷಯಗಳಲ್ಲಿ ಪ್ರಗತಿ ಸಾಧಿಸಲು ಸಮಯಾವಕಾಶ ಬೇಕಾಗುತ್ತದೆ ಎಂದು ಸರ್ತಾಜ್ ಅಜೀಜ್ ತಿಳಿಸಿದ್ದಾರೆ.
Advertisement