ಟೋಕಿಯೋ: ಸಣ್ಣ ಗಾತ್ರದ ವಿಮಾನವೊಂದು ಮನೆಗಳಿಗೆ ಡಿಕ್ಕಿ ಹೊಡೆದು ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಜಪಾನ್ ರಾಜಧಾನಿ ಟೋಕಿಯೋದಲ್ಲಿ ನಡೆದಿದೆ.
ವಿಮಾನ ಡಿಕ್ಕಿ ಹೊಡೆದ ಪರಿಣಾಮ ಮನೆಗಳಿಗೆ ಬೆಂಕಿ ಹೊತ್ತಿಕೊಂಡು ಮೂರು ಮಂದಿ ಸಾವನಪ್ಪಿದ್ದಾರೆ. ವಿಮಾನದಲ್ಲಿ ಒಟ್ಟು ಐದು ಮಂದಿ ಪ್ರಯಾಣಿಸುತ್ತಿದ್ದರೂ ಎನ್ನಲಾಗಿದೆ. ವಿಮಾನದಲ್ಲಿದ್ದ ಇಬ್ಬರು ಹಾಗೂ ಮನೆಯೊಳಗಿದ್ದ ಒಬ್ಬ ಮಹಿಳೆ ದುರಂತದಲ್ಲಿ ಸಾವನ್ನಪ್ಪಿದ್ದಾರೆ.
ಇನ್ನು ವಿಮಾನ ಡಿಕ್ಕಿ ಹೊಡೆದ ಪರಿಣಾಮ ಹಲವು ಮನೆಗಳಿಗೆ ಹಾನಿಯಾಗಿದೆ. ವಿಮಾನದಲ್ಲಿದ್ದ ಇನ್ನುಳಿದ ಮಂದಿಗೆ ಗಂಭೀರ ಗಾಯಗಳಾಗಿವೆ. ರಕ್ಷಣಾ ಪಡೆ ಸ್ಥಳಕ್ಕಾಗಮಿಸಿದ್ದು, ರಕ್ಷಣಾ ಕಾರ್ಯ ಆರಂಭವಾಗಿದೆ. ಇನ್ನು ದುರಂತದಲ್ಲಿ ಮೂರು ಮನೆಗ ಹಾಗೂ ಎರಡು ಕಾರುಗಳು ಭಸ್ಮವಾಗಿವೆ ಎಂದು ಅಗ್ನಿಶಾಮಕ ದಳ ಅಧಿಕಾರಿಗಳು ತಿಳಿಸಿದ್ದಾರೆ.
Advertisement