ಮಾಲ್ಡೀವ್ಸ್ ನಲ್ಲಿ ತಾತ್ಕಾಲಿಕ ತುರ್ತು ಪರಿಸ್ಥಿತಿ ಘೋಷಣೆ

ದ್ವೀಪ ರಾಷ್ಟ್ರ ಮಾಲ್ಡೀವ್ಸ್ ನಲ್ಲಿ ಮತ್ತೆ ಅರಾಜಕತೆ ಸೃಷ್ಟಿಯಾದ ಪರಿಣಾಮ ಮೂವತ್ತು ದಿನಗಳ ತಾತ್ಕಾಲಿಕ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ...
ಮಾಲ್ಡೀವ್ಸ್ ಅಧ್ಯಕ್ಷ ಅಬ್ದುಲ್ಲಾ ಯಮೀನ್ (ಸಂಗ್ರಹ ಚಿತ್ರ)
ಮಾಲ್ಡೀವ್ಸ್ ಅಧ್ಯಕ್ಷ ಅಬ್ದುಲ್ಲಾ ಯಮೀನ್ (ಸಂಗ್ರಹ ಚಿತ್ರ)

ಮಾಲೆ: ದ್ವೀಪ ರಾಷ್ಟ್ರ ಮಾಲ್ಡೀವ್ಸ್ ನಲ್ಲಿ ಮತ್ತೆ ಅರಾಜಕತೆ ಸೃಷ್ಟಿಯಾದ ಪರಿಣಾಮ ಮೂವತ್ತು ದಿನಗಳ ತಾತ್ಕಾಲಿಕ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.

ಸೇನೆಗೆ ಸಂಪೂರ್ಣ ಅಧಿಕಾರ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಲ್ಡೀವ್ಸ್ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗಿದ್ದು, ರಾಜಧಾನಿ ಮಾಲೆಯಲ್ಲಿ ಇಂದು ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಮತ್ತು  ಸ್ಫೋಟಕಗಳು ಪತ್ತೆಯಾಗಿವೆ. ಈ ಹಿನ್ನಲೆಯಲ್ಲಿ ಅಧ್ಯಕ್ಷ ಅಬ್ದುಲ್ಲಾ ಯಮೀನ್ ಅವರು ಮುವತ್ತು ದಿನಗಳ ತಾತ್ಕಾಲಿಕ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್  ನಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಅವರು, ಬುಧವಾರ ಮಧ್ಯಾಹ್ನ 12 ಗಂಟೆಯಿಂದ ಮೂವತ್ತು ದಿನಗಳವರೆಗೆ ದೇಶದಲ್ಲಿ ತುರ್ತುಪರಿಸ್ಥಿತಿ ಘೋಷಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ರಾಜಧಾನಿ ಮಾಲೆಯಲ್ಲಿ ನಿಲ್ಲಿಸಲಾಗಿದ್ದ ಲಾರಿಯೊಂದರಲ್ಲಿ ಭಾರೀ ಸಂಖ್ಯೆಯ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕಗಳು ಪತ್ತೆಯಾದ ಬಳಿಕ ತುರ್ತುಪರಿಸ್ಥಿತಿ ಘೋಷಿಸಲಾಗಿದ್ದು, ಮತ್ತೊಂದು  ಆತಂಕಕಾರಿ ಬೆಳವಣಿಗೆ ಎಂದರೆ ಮಾಲ್ಡೀವ್ ಸೇನಾ ಶಸ್ತ್ರಾಗಾರದಲ್ಲಿದ್ದ ಹಲವು ಶಸ್ತ್ರಾಸ್ತ್ರಗಳು ಸಹ ಕಂಡು ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಹಿರಿಯ ಅಧಿಕಾರಿಗಳು ತನಿಖೆ  ಕೈಗೊಂಡಿದ್ದಾರೆ.

ಅಕ್ಟೋಬರ್ 25ರಂದು ಮಾಲ್ಡೀವ್ಸ್ ಅಧ್ಯಕ್ಷರ ಹತ್ಯಾಯತ್ನದ ಆರೋಪದ ಮೇಲೆ ಉಪಾಧ್ಯಕ್ಷ ಅಹ್ಮದ್ ಅದೀಬ್ ಅವರನ್ನು ಬಂಧಿಸಿದ ಬೆನ್ನಿಗೆ ಈ ಭಾರೀ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕಗಳು  ಪತ್ತೆಯಾಗಿರುವುದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com