ನವದೆಹಲಿ: ವಿದೇಶಾಂಗ ಇಲಾಖೆಯ ಹಿರಿಯ ಅಧಿಕಾರಿ ಸಯ್ಯದ್ ಅಕ್ಬರುದ್ದೀನ್‍ರನ್ನು ವಿಶ್ವಸಂಸ್ಥೆ ಯಲ್ಲಿ ಭಾರತದ ಕಾಯಂ ಪ್ರತಿನಿಧಿಯನ್ನಾಗಿ ನೇಮಿಸಲಾಗಿದೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಕಾಯಂ ಸದಸ್ಯತ್ವ ಪಡೆದುಕೊಳ್ಳುವ ನಿಟ್ಟಿನಲ್ಲಿ ಅವರ ಶ್ರಮ ಹೆಚ್ಚು ಪ್ರಾಮುಖ್ಯತೆ ಪಡೆಯಲಿದೆ. ಇದುವರೆಗೆ ಅಶೋಕ್ ಮುಖರ್ಜಿಯವರು ಈ ಹುದ್ದೆಯನ್ನು ನಿರ್ವಹಿಸುತ್ತಿದ್ದರು.
ಅಕ್ಬರುದ್ದೀನ್ ಅವರು 1985ನೇ ಬ್ಯಾಚ್‍ನ ಐಎಫ್ಎಸ್ ಅಧಿಕಾರಿಯಾಗಿದ್ದಾರೆ. ಮೂರೂವರೆ ವರ್ಷಗಳ ಕಾಲ ವಿದೇಶಾಂಗ ಇಲಾಖೆಯ ವಕ್ತಾರರಾಗಿದ್ದರು. ಸದ್ಯ ಅವರು ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದಾರೆ.
ಇಲಾಖೆಯ ಪ್ರಕಾಶನ ವಿಭಾಗದಲ್ಲಿದ್ದ ವೇಳೆ ಸಾಮಾಜಿಕ ಜಾಲತಾಣ ಮತ್ತು ಡಿಜಿಟಲ್ ಮಾಧ್ಯಮಗಳ ಬಗ್ಗೆ ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಿದ್ದರು.