ಕಾಶ್ಮೀರ ವಿವಾದ ವಿಭಜನೆ ಸಂದರ್ಭದಲ್ಲಿ ಇತ್ಯರ್ಥವಾಗದೆ ಉಳಿದಿರುವ ವಿಷಯ: ಪಾಕ್ ಸೇನಾ ಮುಖ್ಯಸ್ಥ

ಪಾಕಿಸ್ತಾನ ಸೇನಾ ಮುಖ್ಯಸ್ಥ ರಹೀಲ್ ಶರೀಫ್ ಕಾಶ್ಮೀರ ವಿವಾದವನ್ನು ಭಾರತ-ಪಾಕಿಸ್ತಾನ ವಿಭಜನೆ ಸಂದರ್ಭದ ಇತ್ಯರ್ಥವಾಗದೆ ಉಳಿದಿರುವ ವಿಷಯ ಎಂದು ಹೇಳಿದ್ದಾರೆ.
ಕಾಶ್ಮೀರ ವಿವಾದ ವಿಭಜನೆ ಸಂದರ್ಭದಲ್ಲಿ ಇತ್ಯರ್ಥವಾಗದೆ ಉಳಿದಿರುವ ವಿಷಯ: ಪಾಕ್ ಸೇನಾ ಮುಖ್ಯಸ್ಥ

ಇಸ್ಲಾಮಾಬಾದ್: ಪಾಕಿಸ್ತಾನ ಸೇನಾ ಮುಖ್ಯಸ್ಥ ರಹೀಲ್ ಶರೀಫ್ ಕಾಶ್ಮೀರ ವಿವಾದವನ್ನು ಭಾರತ-ಪಾಕಿಸ್ತಾನ ವಿಭಜನೆ ಸಂದರ್ಭದ ಇತ್ಯರ್ಥವಾಗದೆ ಉಳಿದಿರುವ ವಿಷಯ ಎಂದು ಹೇಳಿದ್ದು ವಿವಾದವನ್ನು ಬಗೆಹರಿಸಿಕೊಳ್ಳಲು ಅಂತಾರಾಷ್ಟ್ರೀಯ ಸಮುದಾಯ ಸಹಾಯ ಮಾಡಬೇಕೆಂದು ಕೋರಿದ್ದಾರೆ.
ಲಂಡನ್ ನಲ್ಲಿರುವ ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದ ಚಿಂತಕರ ಚಾವಡಿಯನ್ನುದ್ದೇಶಿಸಿ ಮಾತನಾಡಿರುವ ರಹೀಲ್ ಶರೀಫ್, ಭಾರತ-ಪಾಕ್ ವಿಭಜನೆಯಾದ ಸಂದರ್ಭದಲ್ಲಿ ಕಾಶ್ಮೀರ ವಿಷಯ ಇತ್ಯರ್ಥವಾಗದೇ ಉಳಿದಿದೆ. ಭಾರತ-ಪಾಕ್ ಪ್ರದೇಶದಲ್ಲಿ ಶಾಂತಿ ನೆಲೆಸಬೇಕೆಂದಿದ್ದರೆ ಅಂತಾರಾಷ್ಟ್ರೀಯ ಸಮುದಾಯ ಈ ವಿವಾದವನ್ನು ಬಗೆಹರಿಸಿಕೊಳ್ಳಲು ಸಹಾಯ ಮಾಡಬೇಕು ಎಂದು ಮನವಿ ಮಾಡಿದ್ದಾರೆ.  
ಅಪ್ಘಾನಿಸ್ತಾನದ ಬಗ್ಗೆಯೂ ಮಾತನಾಡಿರುವ ರಹಿಲ್ ಶರೀಫ್, ನೆರೆ ರಾಷ್ಟ್ರದಲ್ಲಿ ಶಾಂತಿ ಸ್ಥಾಪನೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಶರೀಫ್ ಭರವಸೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com