ಹಜ್ ಕಾಲ್ತುಳಿತ ದುರಂತದಲ್ಲಿ ಮಡಿದ ಭಾರತೀಯರ ಸಂಖ್ಯೆ 101ಕ್ಕೆ ಏರಿಕೆ

ಮೆಕ್ಕಾದಲ್ಲಿ ಹಜ್ ಯಾತ್ರೆ ವೇಳೆ ಸಂಭವಿಸಿದ ಕಲ್ತುಳಿತ ದುರಂತದಲ್ಲಿ ಮೃತಪಟ್ಟ ಭಾರತೀಯ ಸಂಖ್ಯೆ 101ಕ್ಕೆ ಏರಿಕೆಯಾಗಿದೆ...
ಹಜ್ ಕಾಲ್ತುಳಿತ
ಹಜ್ ಕಾಲ್ತುಳಿತ
ಮೀನಾ: ಮೆಕ್ಕಾದಲ್ಲಿ ಹಜ್ ಯಾತ್ರೆ ವೇಳೆ ಸಂಭವಿಸಿದ ಕಲ್ತುಳಿತ ದುರಂತದಲ್ಲಿ ಮೃತಪಟ್ಟ ಭಾರತೀಯ ಸಂಖ್ಯೆ 101ಕ್ಕೆ ಏರಿಕೆಯಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್, ಸೌಧಿ ಅಧಿಕಾರಿಗಳು ನೀಡಿರುವ ಸದ್ಯದ ಮಾಹಿತಿಯ ಪ್ರಕಾರ ಇಲ್ಲಿಯವರೆಗೆ 101 ಜನ ಭಾರತೀಯರು ಮೃತಪಟ್ಟಿದ್ದು, ಕಾಣೆಯಾಗಿದ್ದ 32 ಜನ ಪತ್ತೆಯಾಗಿಲ್ಲ' ಎಂದು ಸ್ಪಷ್ಟ ಪಡಿಸಿದ್ದಾರೆ. ನಾಪತ್ತೆಯಾಗಿರುವ ಭಾರತೀಯರ ಪತ್ತೆಗೆ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ತಿಳಿಸಿದ್ದಾರೆ
ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಮೆಕ್ಕಾದ ಪ್ರಮುಖ ಮಸೀದಿಯಿಂದ ಸುಮಾರು 7 ಕಿ.ಮೀ. ದೂರವಿರುವ ಮೀನಾದಲ್ಲಿ ಹಜ್ ಯಾತ್ರೆಯ ಅಂತಿಮ ಆಚರಣೆಯಾದ ಸೈತಾನನಿಗೆ ಕಲ್ಲು ಹೊಡೆಯುವ ಪ್ರಕ್ರಿಯೆ ವೇಳೆ ನೂಕುನುಗ್ಗಲು ನಡೆದು ಈ ಘಟನೆ ಸಂಭವಿಸಿತ್ತು. ಇದು ಹಜ್‍ನ ಇತಿಹಾಸದಲ್ಲೇ ನಡೆದ ಎರಡನೇ ಅತಿ ಭೀಕರ ದುರಂತವಾಗಿದೆ. 1990ರಲ್ಲಿ ನಡೆದ ಕಾಲ್ತುಳಿತಕ್ಕೆ 1,426 ಮಂದಿ  ಮೃತಪಟ್ಟಿದ್ದರು. ಕಳೆದ ತಿಂಗಳ ಆರಂಭದಲ್ಲಿ ಬೃಹತ್ ಕ್ರೇನ್ ವೊಂದು ಮೆಕ್ಕಾ ಮಸೀದಿ ಮೇಲೆ ಕುಸಿದು ಬಿದ್ದು 107 ಮಂದಿ ಸಾವಿಗೀಡಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com