ದ್ವಿಪಕ್ಷೀಯ ಮಾತುಕತೆಗಾಗಿ ಪ್ರತ್ಯೇಕತಾವಾದಿಗಳೊಂದಿಗೆ ಮಾತುಕತೆ ನಿಲ್ಲಿಸಲ್ಲ: ಪಾಕಿಸ್ತಾನ

ಭಾರತದೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸುವುದಕ್ಕಾಗಿ ಕಾಶ್ಮೀರಿ ಪ್ರತ್ಯೇಕತಾವಾದಿಗಳೊಂದಿಗೆ ಮಾತುಕತೆ ನಿಲ್ಲಿಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ ಹೇಳಿದೆ.
ಪಾಕಿಸ್ತಾನ
ಪಾಕಿಸ್ತಾನ

ವಿಶ್ವಸಂಸ್ಥೆ: ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯಲ್ಲಿ ತನ್ನ ಮೊಂಡುತನವನ್ನು ಮುಂದುವರೆಸಿರುವ ಪಾಕಿಸ್ತಾನ, ಭಾರತದೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸುವುದಕ್ಕಾಗಿ ಕಾಶ್ಮೀರಿ ಪ್ರತ್ಯೇಕತಾವಾದಿಗಳೊಂದಿಗೆ ಮಾತುಕತೆ ನಿಲ್ಲಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಕಾಶ್ಮೀರ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಲು ಪ್ರತ್ಯೇಕತಾವಾದಿಗಳೊಂದಿಗೆ ಮಾತುಕತೆ ನಡೆಸುವುದು ಅವಶ್ಯವಾಗಿದೆ, ಆದರೆ ಭಾರತ ಷರತ್ತು ವಿಧಿಸುತ್ತಿರುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪಾಕಿಸ್ತಾನದ ವಿಶ್ವಸಂಸ್ಥೆಯ ಖಾಯಂ ಪ್ರತಿನಿಧಿ ಮಲೀಹ ಲೋಧಿ ಸ್ಪಷ್ಟಪಡಿಸಿದ್ದಾರೆ.

ಪಾಕಿಸ್ತಾನದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಭಾರತದ ರಾಯಭಾರಿ ಅಭಿಷೇಕ್ ಸಿಂಗ್, ಪ್ರತ್ಯೇಕತಾವಾದಿಗಳೊಂದಿಗೆ ಮಾತುಕತೆ ನಡೆಸುವುದಾಗಿ ಹೇಳುತ್ತಿರುವ ಪಾಕಿಸ್ತಾನ ಭಾರತದ  ಆಂತರಿಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಪಾಕಿಸ್ತಾನ ಪ್ರಧಾನಿ ಹೇಳಿದ್ದ ನಾಲ್ಕು ಅಂಶಗಳನ್ನು ಪುನರುಚ್ಚರಿಸಿರುವ ಪಾಕ್ ಪ್ರತಿನಿಧಿ ಲೋಧಿ, ದ್ವಿಪಕ್ಷೀಯ ಮಾತುಕತೆಗೆ ಭಾರತ ಆಸಕ್ತಿ ತೋರದೆ ಇದ್ದರೂ, ಪಾಕಿಸ್ತಾನ ಮಾತುಕತೆಗೆ ಸಿದ್ಧವಿರುವುದಾಗಿ ತಿಳಿಸಿದ್ದಾರೆ. ಭಯೋತ್ಪಾದನೆಯನ್ನು ಬಿಟ್ಟರೆ ಮಾತ್ರ ಮಾತುಕತೆ ನಡೆಸುವುದಾಗಿ ಸ್ಪಷ್ಟಪಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com