
ಕರಾಚಿ: ಕಾಶ್ಮೀರ ಸೇರಿದಂತೆ ಹಲವು ಸಮಸ್ಯೆಗಳನ್ನು ಬಗೆಹರಿಸಲು ಭಾರತ ಮತ್ತು ಪಾಕಿಸ್ತಾನದ ನಡುವೆ ನಿರಂತರ ಸೌಹಾರ್ದಯುತ ಮಾತುಕತೆಗೆ ಪಾಕಿಸ್ತಾನ ಪ್ರಧಾನ ಮಂತ್ರಿ ಮತ್ತು ಅಮೆರಿಕ ಅಧ್ಯಕ್ಷ ಒಮ್ಮತದ ಅಭಿಪ್ರಾಯಕ್ಕೆ ಬಂದಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ಮಧ್ಯೆ ಉತ್ತಮ ಬಾಂಧವ್ಯ ಏರ್ಪಟ್ಟರೆ ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಶಾಂತಿ ನೆಲೆಸುತ್ತದೆ ಎಂದು ಪಾಕಿಸ್ತಾನದ ಡಾನ್ ಪತ್ರಿಕೆ ವರದಿ ಮಾಡಿದೆ.
ಕಾಶ್ಮೀರ ಗಡಿ ಭಾಗದಲ್ಲಿ ಒಪ್ಪಂದ ಪದೇ ಪದೇ ಉಲ್ಲಂಘನೆಯಾಗುತ್ತಿರುವ ಬಗ್ಗೆಯೂ ಈ ನಾಯಕರು ಕಳವಳ ವ್ಯಕ್ತಪಡಿಸಿದ್ದಾರೆ.
Advertisement