ಪಾಕಿಸ್ತಾನ: ಮೊಹರಂ ಮೆರವಣಿಗೆ ವೇಳೆ ಆತ್ಮಾಹುತಿ ಬಾಂಬ್‌ ದಾಳಿ, 22 ಸಾವು

ಪಾಕಿಸ್ತಾನದ ಸಿಂಧ್‌ ಪ್ರಾಂತ್ಯದಲ್ಲಿ ಮೊಹರಂ ವೇಳೆ ಆತ್ಮಾಹುತಿ ಬಾಂಬ್‌ ದಾಳಿಗೆ ನಾಲ್ವರು ಮಕ್ಕಳು ಸೇರಿ 22 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ...
ಬಾಂಬ್ ದಾಳಿ
ಬಾಂಬ್ ದಾಳಿ
ಇಸ್ಲಾಮಾಬಾದ್‌: ಪಾಕಿಸ್ತಾನದ ಸಿಂಧ್‌ ಪ್ರಾಂತ್ಯದಲ್ಲಿ ಮೊಹರಂ ವೇಳೆ ಆತ್ಮಾಹುತಿ ಬಾಂಬ್‌ ದಾಳಿಗೆ ನಾಲ್ವರು ಮಕ್ಕಳು ಸೇರಿ 22 ಮಂದಿ ಸಾವನ್ನಪ್ಪಿದ್ದು,  40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 
ಮೊಹರಂ ಪ್ರಯುಕ್ತ ನಡೆಯುತ್ತಿದ್ದ ಮೆರವಣಿಗೆ ವೇಳೆ ಬಾಂಬರ್ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದು ಈ ದುರ್ಘಟನೆಗೆ ಕಾರಣವಾಗಿದ್ದು, ಸ್ಥಳದಲ್ಲೇ 22 ಮಂದಿ ಅಸುನೀಗಿದ್ದಾರೆ. ಬಾಂಬ್ ದಾಳಿಯಲ್ಲಿ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಪಾಕಿಸ್ತಾನದಲ್ಲಿ ಇತ್ತೀಚೆಗೆ ಬಾಂಬ್ ದಾಳಿಗಳು ಹೆಚ್ಚಾಗುತ್ತಿದ್ದು, ಸದ್ಯ ನಡೆದಿರುವ ಬಾಂಬ್ ದಾಳಿಯ ಹೊಣೆಯನ್ನು ಯಾವುದೇ ಉಗ್ರ ಸಂಘಟನೆ ಹೊತ್ತಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com