ಯೆಮೆನ್: ತೈಲ ಸ್ಮಗ್ಲರ್ ಗಳನ್ನು ಗುರಿಯಾಗಿರಿಸಿಕೊಂಡು ಸೌದಿ ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ 20 ಭಾರತೀಯರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಪಶ್ಚಿಮ ಯೆಮನ್ ನ ಹೊಡೈದಾ ಪ್ರದೇಶದ ಬಳಿ ಇರುವ ಅಲ್ ಖೋಕಾ ಬಂದರು ಬಳಿ ಸೌದಿ ಸೇನೆ ವೈಮಾನಿಕ ದಾಳಿ ನಡೆಸಿದ್ದು, ಎರಡು ಬೋಟ್ ಗಳಿದ್ದ 20 ಮಂದಿ ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದ್ದು, ಸೌದಿ ಸೇನೆ ವೈಮಾನಿಕ ದಾಳಿ ಬಗ್ಗೆ ಸ್ಥಳೀಯ ಮೀನುಗಾರರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತೀಯ ವಿದೇಶಾಂಗ ಇಲಾಖೆ, ಸೌದಿ ಸೇನೆ ವೈಮಾನಿಕ ದಾಳಿಯಲ್ಲಿ ಭಾರತೀಯರು ಸಾವನ್ನಪ್ಪಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ. ಸದ್ಯ ಘಟನೆ ಬಗ್ಗೆ ಸತ್ಯಾಸತ್ಯತೆಯನ್ನು ತಿಳಿಯುವ ಸಂಬಂಧ ಕಾರ್ಯ ಪ್ರವೃತ್ತರಾಗಿದ್ದೇವೆ ಎಂದು ಭಾರತೀಯ ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್ ಹೇಳಿದ್ದಾರೆ.