ಶೇಖ್ ಹಸೀನಾ ಮತ್ತು ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಒಪ್ಪಂದದ ಪರಾಮರ್ಶೆ

ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅಮೆರಿಕದಲ್ಲಿ ಮಾತುಕತೆ ನಡೆಸಿದ್ದು, ದ್ವಿಪಕ್ಷೀಯ ಸಂಗತಿಗಳ ಬಗ್ಗೆ ಚರ್ಚಿಸಿದ್ದಾರೆ,..
ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ
ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ

ನ್ಯೂಯಾರ್ಕ್:  ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅಮೆರಿಕದಲ್ಲಿ ಮಾತುಕತೆ ನಡೆಸಿದ್ದು, ದ್ವಿಪಕ್ಷೀಯ ಸಂಗತಿಗಳ ಬಗ್ಗೆ ಚರ್ಚಿಸಿದ್ದಾರೆ.

ಉಭಯ ದೇಶಗಳ ನಡುವಿನ ಭೂ ಒಪ್ಪಂದವನ್ನು ಜಾರಿಗೊಳಿಸುತ್ತಿರುವುದಕ್ಕೆ ಉಭಯ ನಾಯಕರು ಸಂತಸ ವ್ಯಕ್ತಪಡಿಸಿದ್ದು, ಇದೊಂದು ಅತ್ಯುತ್ತಮ ಭೇಟಿ,' ಎಂದು ವಿದೇಶಾಂಗ ವ್ಯವಹಾರ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಹೇಳಿದ್ದಾರೆ.

'ಬಾಂಗ್ಲಾದೇಶ, ಬೂತಾನ್, ಭಾರತ ಮತ್ತು ನೇಪಾಳ ಮಾದರಿಯಲ್ಲಿ ಉಭಯ ದೇಶಗಳ ನಡುವೆ ಮೂಲ ಸೌಕರ್ಯ ಸಂಪರ್ಕ ಸಂಬಂಧಿಸಿದಂತೆ ಮಾತುಕತೆ ನಡೆಸಲಾಯಿತು. ಈ ಒಪ್ಪಂದದಿಂದ ಬಡತನವನ್ನು ಸಾಕಷ್ಟು ನಿರ್ಮೂಲನೆ ಮಾಡಲು ಸಾಧ್ಯವೆಂದು ಪ್ರಧಾನಿ ಹೇಳಿದ್ದಾರೆ ಎಂದು ಸ್ವರೂಪ್ ತಿಳಿಸಿದ್ದಾರೆ. ಇನ್ನು ಭೂ ಒಪ್ಪಂದ ಸಂಬಂಧದ ಪ್ರಕ್ರಿಯೆ ಬಗ್ಗೆ ಇಬ್ಬರು ಸಂತಸ ವ್ಯಕ್ತ ಪಡಿಸಿದ್ದಾರೆ. ಇನ್ನು ಇದೇ ವೇಳೆ ಪ್ರಧಾನಿ ಮೋದಿ ಶ್ರೀಲಂಕಾ ಅಧ್ಯಕ್ಷ ಮೈತ್ರಿ ಪಾಲ ಸಿರಿಸೇನಾ ಮತ್ತು ಭೂತಾನ್ ಪ್ರಧಾನಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com