

ಕೊಲಂಬೊ: ಶ್ರೀಲಂಕಾದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ.
ಲಂಕಾ ಕೇಂದ್ರ ನೂವಾರ ಇಲಿಯಾ ಜಿಲ್ಲೆಯ ಕೊಟ್ಮಲೆ ಎಂಬಲ್ಲಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಎರಡು ವರ್ಷದ ಮಗು ಸೇರಿ 7 ಮಂದಿ ಮೃತಪಟ್ಟಿದ್ದಾರೆ. ಇಳಿದಂತೆ 180 ಮಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕೇಂದ್ರ ಅಧಿಕಾರಿಗಳು ತಿಳಿಸಿದ್ದಾರೆ.
ದ್ವೀಪ ಪ್ರದೇಶಗಳಲ್ಲಿ ಹವಾಮಾನ ವೈಪರಿತ್ಯದಿಂದಾಗಿ ಭೂಕುಸಿತ ಸಂಭವಿಸಿದೆ. ಈ ಪ್ರದೇಶದಲ್ಲಿ 100 ಮಿಲಿಮೀಟರ್ ನಷ್ಟು ಮಳೆಯಾಗಿದೆ.