ವಿಶ್ವಸಂಸ್ಥೆ: ಇದೇ ಮೊದಲ ಬಾರಿಗೆ ವಿಶ್ವಸಂಸ್ಥೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಆಚರಣೆ ಮಾಡಲಾಯಿತು. ಈ ಮೂಲಕ ವಿಶ್ವಸಂಸ್ಥೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬೇಡ್ಕರ್ ಜಯಂತಿ ಆಚರಿಸಿ, ಅವರನ್ನು ಶ್ಲಾಘನೆ ಮಾಡಲಾಗಿದೆ.
ಅಂಬೇಡ್ಕರ್ ಅವರು ಸಮಾಜ ಸುಧಾರಕ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯ ಮತ್ತು ಧ್ವನಿ ನೀಡುವ ಮೂಲಕ ಜಾಗತಿಕ ವ್ಯಕ್ತಿಯಾಗಿ ರೂಪಗೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ಉನ್ನತ ಅಧಿಕಾರಿಗಳು ಅಂಬೇಡ್ಕರ್ ಅವರನ್ನು ಬಣ್ಣಿಸಿದ್ದಾರೆ.
ಇದೇ ವೇಳೆ ಅಂಬೇಡ್ಕರ್ ಅವರ ಆಶಯ ಈಡೇರಿಕೆ ಭಾರತದೊಂದಿಗೆ ಕೆಲಸ ಮಾಡಲು ವಿಶ್ವಸಂಸ್ಥೆ ಸಿದ್ಧವಿದೆ ಎಂದು ಹೇಳಿದೆ. ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ(ಯುಎನ್ ಡಿಪಿ)ಆಡಳಿತಾಧಿಕಾರಿ ಹೆಲನ್ ಕ್ಲರ್ಕ್ ತಮ್ಮ ಭಾಷಣದಲ್ಲಿ ಅಂಬೇಡ್ಕರ್ ಜಯಂತಿ ಪ್ರಮುಖ ಕಾರ್ಯಕ್ರಮವನ್ನು ವಿಶ್ವಸಂಸ್ಥೆಯಲ್ಲಿ ಭಾರತ ಆಚರಿಸುತ್ತಿರುವುದಕ್ಕೆ ಶ್ಲಾಘಿಸಿದ್ದಾರೆ.