ಪಶ್ಚಿಮ ಜರ್ಮನಿಯ ಗುರುದ್ವಾರದಲ್ಲಿ ಸ್ಫೋಟ ಮೂವರಿಗೆ ಗಾಯ

ವಿವಾಹ ಸಮಾರಂಭ ನಡೆಯುತ್ತಿದ್ದ ಗುರುದ್ವಾರದ ಮೇಲೆ ಮುಸುಕುಧಾರಿ ವ್ಯಕ್ತಿಯೊಬ್ಬ ಸ್ಫೋಟಕ ಎಸೆದ ಪರಿಣಾಮ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ
ಪಶ್ಚಿಮ ಜರ್ಮಿನಿಯಲ್ಲಿರುವ ಗುರುದ್ವಾರ
ಪಶ್ಚಿಮ ಜರ್ಮಿನಿಯಲ್ಲಿರುವ ಗುರುದ್ವಾರ

ಬರ್ಲಿನ್: ವಿವಾಹ ಸಮಾರಂಭ ನಡೆಯುತ್ತಿದ್ದ ಗುರುದ್ವಾರದ ಮೇಲೆ ಮುಸುಕುಧಾರಿ ವ್ಯಕ್ತಿಯೊಬ್ಬ ಸ್ಫೋಟಕ ಎಸೆದ ಪರಿಣಾಮ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಪಶ್ಚಿಮ ಜರ್ಮನಿಯಲ್ಲಿ ನಡೆದಿದೆ.

ಗುರುದ್ವಾರದಲ್ಲಿ ವಿವಾಹ ಸಮಾರಂಭ ನಡೆಯುತ್ತಿತ್ತು. ಹಾಗಾಗಿ ಸಾಕಷ್ಟು ಜನರು ನೆರೆದಿದ್ದರು. ಈ ಸಂದರ್ಭದಲ್ಲಿ ಮುಸುಕುಧಾರಿ ವ್ಯಕ್ತಿಯೊಬ್ಬ ಜನರ ಮೇಲೆ ಸ್ಫೋಟಕ ಎಸೆದಿದ್ದಾನೆ. ಘಟನೆಯಲ್ಲಿ ಗಾಯಗೊಂಡವರ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ.

ಪ್ರಾಥಮಿಕ ತನಿಖೆಯಿಂದ ಇದು ಭಯೋತ್ಪಾದಕ ಕೃತ್ಯವಲ್ಲ ಎಂಬುದು ತಿಳಿದು ಬಂದಿದೆ. ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು  ಪೊಲೀಸ್ ಇಲಾಖೆ ವಕ್ತಾರರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮೂವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com