ಪಾಕಿಸ್ತಾನದ ಕ್ವೆಟ್ಟಾದಲ್ಲಿ ಉಗ್ರರ ಅಟ್ಟಹಾಸ; ಕನಿಷ್ಟ 40 ಮಂದಿ ಸಾವು

ಪಾಕಿಸ್ತಾನದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಾಹಾಸ ಮೆರೆದಿದ್ದು, ಸೋಮವಾರ ಬೆಳಗ್ಗೆ ಬಲೂಚಿಸ್ತಾನದ ಕ್ವೆಟ್ಟಾದಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಬಾಂಬ್ ಸ್ಫೋಟಿಸಿದ್ದಾರೆ.
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭೀಕರ ಬಾಂಬ್ ಸ್ಫೋಟ (ಸಂಗ್ರಹ ಚಿತ್ರ)
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭೀಕರ ಬಾಂಬ್ ಸ್ಫೋಟ (ಸಂಗ್ರಹ ಚಿತ್ರ)
ಕ್ವೆಟ್ಟಾ: ಪಾಕಿಸ್ತಾನದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಾಹಾಸ ಮೆರೆದಿದ್ದು, ಸೋಮವಾರ ಬೆಳಗ್ಗೆ ಬಲೂಚಿಸ್ತಾನದ ಕ್ವೆಟ್ಟಾದಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಬಾಂಬ್ ಸ್ಫೋಟಿಸಿದ್ದಾರೆ.
ಘಟನೆಯಲ್ಲಿ ಕನಿಷ್ಠ 42 ಮಂದಿ ಸಾವನ್ನಪ್ಪಿದ್ದು, ನೂರಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸ್ ಮೂಲಗಳ ಪ್ರಕಾರ ಬಲೋಚಿಸ್ತಾನ ವಕೀಲರ  ಸಂಘದ ಅಧ್ಯಕ್ಷ ಹಾಗೂ ವಕೀಲ ಬಿಲಾಲ್ ಅನ್ವರ್ ಕಾಸಿ ಅವರು ಅಪರಿಚಿತರಿಂದ ಗುಂಡೇಟಿಗೆ ಬಲಿಯಾಗಿದ್ದನ್ನು ವಿರೋಧಿಸಿ ಇಂದು ನ್ಯಾಯಾಲಯದ ಆವರಣದಲ್ಲಿ ಮೌನಾಚರಣೆ  ನಡೆಸಲಾಗುತ್ತಿತ್ತು. ಈ ವೇಳೆ ಅಲ್ಲಿಗೆ ಸೇನಾ ಸಮವಸ್ತ್ರದಲ್ಲಿ ಆಗಮಿಸಿದ ಉಗ್ರರು ನೋಡ ನೋಡುತ್ತಿದ್ದಂತೆಯೇ ಗುಂಡಿನ ಮಳೆಗರೆದರು.
ಈ ವಿಚಾರ ತಿಳಿಯುತ್ತದ್ದಂತೆಯೇ ಕೋರ್ಟ್ ಅವರಣ ಸುತ್ತುವರೆದ ಪೊಲೀಸರು ಉಗ್ರರ ಮೇಲೆ ಪ್ರತಿದಾಳಿ ಮಾಡಲು ಆರಭಿಸಿದರು. ಸೇನಾ ಸಮವಸ್ತ್ರ ಧರಿಸಿದ್ದ ಮುಸುಕುಧಾರಿ ಕ್ವೆಟ್ಟಾದ  ಮಾನ್ನೋ ಜಾನ್ ಮಾರ್ಗದಲ್ಲಿರುವ ಮೆಂಗಲ್ ಚೌಕ್ ಬಳಿ ಕಾರಿನಲ್ಲಿರುವಾಗಲೇ ಗುಂಡಿನ ದಾಳಿ ನಡೆಸಿದ್ದು, ತಕ್ಷಣ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಲ್ಲಿಯೂ ಅಟ್ಟಹಾಸ ಮೆರೆದ  ಉಗ್ರರು ಬಾಂಬ್ ಸ್ಫೋಟಿಸಿ ಬಳಿಕ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೂ ನುಗ್ಗಿ ಅಲ್ಲಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಇನ್ನೋರ್ವ ವಕೀಲ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು  ಪೊಲೀಸರು ತಿಳಿಸಿದ್ದಾರೆ.
ಇದೇ ವೇಳೆ ವಕೀಲ ಬಿಲಾಲ್ ಅನ್ವರ್ ಕಾಸಿ ಅವರನ್ನು ಆಸ್ಪತ್ರೆಗೆ ದಾಖಲಿಸಿರುವುದನ್ನು ಸುದ್ದಿ ಮಾಡಲು ತೆರಳಿದ್ದ ಖಾಸಗಿ ವಾಹಿನಿ ವರದಿಗಾರ ಶೆಹಜಾದ್ ಅಹಮ್ಮದ್ ಸಾವನ್ನಪ್ಪಿರುವುದಾಗಿ  ವರದಿಯಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇನ್ನು ಈ ಭೀಕರ ಉಗ್ರ ದಾಳಿಯನ್ನು ಈ ವರೆಗೂ ಯಾವುದೇ ಉಗ್ರ ಸಂಘಟನೆ ಹೊತ್ತಿಲ್ಲವಾದರೂ, ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರರು ಈ ಕೃತ್ಯ ನಡೆಸಿರಬಹುದು ಎಂದು  ಪೊಲೀಸರು ಶಂಕಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com