ಗಿಲ್ಗಿಟ್ ಬಾಲ್ಟಿಸ್ತಾನದಿಂದ ಪಾಕ್ ಹೊರನಡೆದರೆ ಕಾಶ್ಮೀರ ವಿವಾದ ಇತ್ಯರ್ಥ: ಅಮೆರಿಕ ಮೂಲದ ಸಂಘಟನೆ

ಅಮೆರಿಕದ ಮೂಲದ ಸಂಘಟನೆಯೊಂದು, ಪಾಕಿಸ್ತಾನ ಆಕ್ರಮಿತ ಪ್ರದೇಶದಿಂದ ಪಾಕಿಸ್ತಾನ ಹಿಂದೆ ಸರಿಯುವುದರಿಂದ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಬಹುದು ಎಂದು ಅಭಿಪ್ರಾಯಪಟ್ಟಿದೆ.
ಗಿಲ್ಗಿಟ್ ಬಾಲ್ಟಿಸ್ತಾನ
ಗಿಲ್ಗಿಟ್ ಬಾಲ್ಟಿಸ್ತಾನ

ಡಲ್ಲಾಸ್: ಪಾಕಿಸ್ತಾನವನ್ನು ಗಿಲ್ಗಿಟ್ ಬಾಲ್ಟಿಸ್ತಾನದ ಅಕ್ರಮಣಕಾರ ಎಂದು ಹೇಳಿರುವ ಅಮೆರಿಕದ ಮೂಲದ ಸಂಘಟನೆಯೊಂದು, ಪಾಕಿಸ್ತಾನ ಆಕ್ರಮಿತ ಪ್ರದೇಶದಿಂದ ಪಾಕಿಸ್ತಾನ ಹಿಂದೆ ಸರಿಯುವುದರಿಂದ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಬಹುದು ಎಂದು ಅಭಿಪ್ರಾಯಪಟ್ಟಿದೆ.

ಗಿಲ್ಗಿಟ್ ಪಾಕಿಸ್ತಾನ ಪ್ರದೇಶದಲ್ಲಿ ನಡೆಯುತ್ತಿರುವ ಮಾನವ ಹಕ್ಕು ಉಲ್ಲಂಘನೆ ನಡೆಯುತ್ತಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಎತ್ತಿ ತೋರಿಸಿರುವುದು ಸಕಾರಾತ್ಮಕ ಕ್ರಮವಾಗಿದೆ ಎಂದು ಗಿಲ್ಗಿಟ್ ಬಾಲ್ಟಿಸ್ತಾನ ರಾಷ್ಟ್ರೀಯ ಕಾಂಗ್ರೆಸ್ ನ  ಅಧ್ಯಕ್ಷ ಸೆಂಜ್ ಸಿರಿಂಗ್ ಹೇಳಿದ್ದಾರೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಪಾಕಿಸ್ತಾನವನ್ನು ಗಿಲ್ಗಿಟ್ ಬಾಲ್ಟಿಸ್ತಾನದ ಆಕ್ರಮಣಕಾರ ಎಂದು ಸ್ಪಷ್ಟವಾಗಿ ಹೇಳಿದ್ದು, ಆ ಪ್ರದೇಶದಿಂದ ಪಾಕಿಸ್ತಾನ ಹೊರನಡೆಯುವದು ಕಾಶ್ಮೀರ ವಿವಾದವನ್ನು ಬಗೆಹರಿಸಲು ಸಹಕಾರಿಯಾಗಲಿದೆ ಎಂದು ಗಿಲ್ಗಿಟ್ ಬಾಲ್ಟಿಸ್ತಾನ್ ರಾಷ್ಟ್ರೀಯ ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com