
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಸ್ವಾತಂತ್ರ್ಯ ದಿನಾಚರಣೆಯ ತಮ್ಮ ಭಾಷಣದಲ್ಲಿ ಬಲೂಚಿಸ್ತಾನದ ಬಗ್ಗೆ ಉಲ್ಲೇಖ ಮಾಡಿದ ಬೆನ್ನಲ್ಲೇ ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿರುವ ಹೋರಾಟಗಾರರು ಜೈಹಿಂದ್ ಘೋಷಣೆ ಕೂಗಿದ್ದಾರೆ.
ಪ್ರಧಾನಿ ಮೋದಿ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಲೂಚಿಸ್ತಾನ ರಿಪಬಲಿಕಂ ಪಕ್ಷದ ನಾಯಕ ಅಶ್ರಫ್, ಬಲೂಚಿಸ್ತಾನ ಹಾಗೂ ಭಾರತ ಶೀಘ್ರವೇ ಸ್ವಾತಂತ್ರ್ಯದಿನಾಚರಣೆಯನ್ನು ಆಚರಿಸಲಿವೆ ಎಂದು ಹೇಳಿದ್ದಾರೆ. ಈ ಮೂಲಕ ಬಲೂಚಿಸ್ತಾನದ ಜನತೆ ಪಾಕಿಸ್ತಾನದಿಂದ ಬಿಡುಗಡೆಗೆ ಕಾಯುತ್ತಿದ್ದಾರೆ ಎಂಬುದು ಮತ್ತಷ್ಟು ಸ್ಪಷ್ಟವಾಗಿದ್ದು ಪಾಕಿಸ್ತಾನಕ್ಕೆ ತೀವ್ರ ಮುಜುಗರ ಉಂಟಾಗಿದೆ.
Advertisement